ಕೇದರ್ ಜಾಧವ್ 
ಕ್ರಿಕೆಟ್

ಧೋನಿ ಮತ್ತು ಸಲ್ಮಾನ್ ಖಾನ್ ಇಬ್ಬರಲ್ಲಿ ಒಬ್ಬರ ಆಯ್ಕೆ, ತಂದೆ ಅಥವಾ ತಾಯಿಯ ಆಯ್ಕೆ ಮಾಡಿದಂತೆ: ಕೇದಾರ್ ಜಾಧವ್

ಚೆನ್ನೈ: ಭಾರತ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ ನನ್ನ ನೆಚ್ಚಿನ ಕ್ರಿಕೆಟಿಗ ಎಂದು ಟೀಮ್‌ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಕೇದಾರ್ ಜಾಧವ್‌ ತಿಳಿಸಿದ್ದಾರೆ. 

ಇನ್‌ಸ್ಟಾಗ್ರಾಮ್‌ ಲೈವ್‌ ಚಾಟ್‌ನಲ್ಲಿ ಮಾತನಾಡಿರುವ ಕೇದಾರ್ ಜಾಧವ್‌, ನನ್ನ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಒಂದು ಹಂತಕ್ಕೆ ತಲುಪಲು ಎಂ.ಎಸ್‌ ಧೋನಿ ನನಗೆ ಸಾಕಷ್ಟು ನೆರವಾಗಿದ್ದಾರೆ.  ಹಾಗಾಗಿ , ಅವರು ನನ್ನ ನೆಚ್ಚಿನ ಕ್ರಿಕೆಟಿಗರಾಗಿ ಉಳಿದಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ಸಚಿನ್ ತೆಂಡೂಲ್ಕರ್ ಜೊತೆ ಒಂದೇ ಒಂದು ಮ್ಯಾಚ್ ಆಡದಿರುವುದಕ್ಕೆ ಪಶ್ಚಾತ್ತಾಪವಿದೆ ಎಂದು ತಿಳಿಸಿದ್ದಾರೆ, ನಾನು ಸಚಿನ್ ತೆಂಡೂಲ್ಕರ್ ಅವರ ಕ್ರಿಕೆಟ್ ನೋಡುತ್ತಾ ಬೆಳೆದೆ, ಆದರೆ ಅವರ ಜೊತೆ ಒಂದೇ ಒಂದು ಮ್ಯಾಚ್ ಆಡದಿರುವುದು ಬೇಸರದ ಸಂಗತಿ ಎಂದು ಹೇಳಿದ್ದಾರೆ.

ನಾನು ಧೋನಿ ಅವರನ್ನು ಮೊದಲ ಭೇಟಿ ಮಾಡಿದಾಗ, ಅವರು ತುಂಬಾ ಸ್ಟ್ರಿಕ್ಟ್ ಎಂದು ಭಾವಿಸಿದ್ದೆ ಆದರೆ ಅವರನ್ನು ಭೇಟಿ ಮಾಡಿದ ನಂತರ ಅವರ ಬಗೆಗಿದ್ದ ಅಭಿಪ್ರಾಯ ಬದಲಾಯಿತು ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ಮತ್ತು ಧೋನಿ ಅವರಲ್ಲಿ ಯಾರು ನಿಮ್ಮ ಅಚ್ಚು ಮೆಚ್ಚು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು  ಅಪ್ಪ ಮತ್ತು ಅಮ್ಮ ನ ನಡುವೆ ಆಯ್ಕೆ ಮಾಡಿದಂತೆ ಎಂದು
ಹೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ಆಯ್ಕೆ ಮಾಡುವುದು ತುಂಬಾ ಕಷ್ಟ ಎಂದು ಕೇದಾರ್ ಜಾಧವ್ ಹೇಳಿದ್ದಾರೆ.,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!