ತಮ್ಮ ನೆಚ್ಚಿನ ಭಾರತೀಯ ಬ್ಯಾಟ್ಸ್ಮನ್ಗಳನ್ನು ಹೆಸರಿಸಿದ ಶಾಹಿದ್ ಅಫ್ರಿದಿ
ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಅವರ ನೆಚ್ಚಿನ ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಯಾರು? ಎಂಬುದಕ್ಕೆ ಉತರಿಸಿದ್ದಾರೆ.
ನವದೆಹಲಿ: ಕೊರೋನಾ ವೈರಸ್ ನಡುವೆಯೂ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಧಾನವಾಗಿ ಗರಿ ಗೆದರುತ್ತಿದೆ. ಈ ಸಮಯದಲ್ಲಿ ಟ್ವಿಟರ್ನಲ್ಲಿ ಚುರುಕಾಗಿರುವ ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಅಭಿಮಾನಿಗಳು ತಮ್ಮ ವೃತ್ತಿ ಬದುಕು ಮತ್ತು ಖಾಸಗಿ ಜೀವನದ ಬಗ್ಗೆ ಕೇಳುತ್ತಿರುವ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವ ಕೆಲಸ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಅಫ್ರಿದಿ ಅವರನ್ನು ಕೇಳಲಾದ ಪ್ರಶ್ನೆ ಏನೆಂದರೆ, ಅವರ ಆಯ್ಕೆಯ ನೆಚ್ಚಿನ ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಯಾರು? ಎಂಬುದು. ಇದಕ್ಕೆ ಉತ್ತರಿಸಿದ ಆಲ್ರೌಂಡರ್, ತಮ್ಮ ವೃತ್ತಿಬದುಕಿನಲ್ಲಿ ಸಾಕಷ್ಟು ಸಮಯ ಎದುರಾಳಿಗಳಾಗಿ ಆಡಿದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್ ಅವರಂತಹ ದಿಗ್ಗಜರ ಹೆಸರನ್ನು ಹೇಳದೆ ಹಾಲಿ ಕ್ಯಾಪ್ಟನ್ ಮತ್ತು ವೈಸ್ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹೆಸರನ್ನು ತೆಗೆದುಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.