ಯಜುವೇಂದ್ರ ಚಹಾಲ್-ಧನಶ್ರೀ ವರ್ಮಾ 
ಕ್ರಿಕೆಟ್

ಧನಶ್ರೀ ವರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯಜುವೇಂದ್ರ ಚಹಾಲ್

ಟೀಂ ಇಂಡಿಯಾ ಪ್ರೀಮಿಯರ್‌ ಸ್ಪಿನ್ನರ್‌ ಯಜ್ವೇಂದ್ರ ಚಹಲ್‌ ಶನಿವಾರ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸೋಶಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೊರೊನಾ ವೈರಸ್‌ ಲಾಕ್‌ಡೌನ್‌ ಸಮಯದಲ್ಲಿ ಮನೆಯಲ್ಲಿಯೇ ತಮ್ಮ ಸಮಯವನ್ನು ಕಳೆಯುತ್ತಿರುವ ಚಹಲ್‌, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ಪ್ರೀಮಿಯರ್‌ ಸ್ಪಿನ್ನರ್‌ ಯಜ್ವೇಂದ್ರ ಚಹಲ್‌ ಶನಿವಾರ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸೋಶಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೊರೊನಾ ವೈರಸ್‌ ಲಾಕ್‌ಡೌನ್‌ ಸಮಯದಲ್ಲಿ ಮನೆಯಲ್ಲಿಯೇ ತಮ್ಮ ಸಮಯವನ್ನು ಕಳೆಯುತ್ತಿರುವ ಚಹಲ್‌, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. 

ಲೆಗ್‌ ಸ್ಪಿನ್ನರ್‌ ಯಜ್ವೇಂದ್ರ ಚಹಲ್‌ ಅವರು ತಮ್ಮ ಭಾವಿ ಪತ್ನಿ ಧನಶ್ರೀ ವರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. "ನಮ್ಮ ಕುಟುಂಬದೊಂದಿಗೆ ನಾವು ಹೇಳುತ್ತೇವೆ "ಹೌದು" #rokaceremony,” ಎಂದು ಟ್ವಿಟರ್‌ ಹಾಗೂ ಇನ್‌ಸ್ಟಾಗ್ರಾಮ್‌ ಖಾತೆಯನ್ನು ಹಂಚಿಕೊಂಡಿರುವ ಹಲವು ಫೋಟೊಗಳಿಗೆ ಶೀರ್ಷಿಕೆಯನ್ನು ಕೊಟ್ಟಿದ್ದಾರೆ. 

ನಿಶ್ಚಿತಾರ್ಥಕ್ಕೂ ಮೊದಲು ಚಹಲ್, ತಮ್ಮ ಜತೆಗಾರ್ತಿ ಧನಶ್ರೀ ವರ್ಮಾ ಅವರೊಂದಿಗೆ ಕೆಲವು ಜೂಮ್ ಕಾರ್ಯಾಗಾರಗಳಲ್ಲಿ ಕಾಣಿಸಿಕೊಂಡಿದ್ದರು. ಧನಶ್ರೀ ವರ್ಮಾ ಅವರು ವೈದ್ಯ ಮತ್ತು ನೃತ್ಯ ಸಂಯೋಜಕರಾಗಿರುವುದಲ್ಲದೆ, ಯೂಟ್ಯೂಬ್‌ನಲ್ಲಿ ಸಕ್ರಿಯರಾಗಿದ್ದಾರೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೊಫೈಲ್ ನೋಡುವ ಮೂಲಕ ತಿಳಿದುಬಂದಿದೆ.

ಟೀಮ್‌ ಇಂಡಿಯಾ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹಾಗೂ ನತಾಶಾ ಸ್ಟ್ಯಾನ್‌ಕೋವಿಚ್‌ ದಂಪತಿಗೆ ಇತ್ತೀಚೆಗಷ್ಟೇ ಗಂಡು ಮಗು ಜನಿಸಿತ್ತು. ಇದಾದ ಕೆಲ ದಿನಗಳಲ್ಲಿ ಮುಂಬೈ ಇಂಡಿಯನ್ಸ್‌ ಲೆಗ್‌ ಸ್ಪಿನ್ನರ್‌ ಯಜ್ವೇಂದ್ರ ಚಹಲ್‌ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗುವ ಮೂಲಕ ಯಜ್ವೇಂದ್ರ ಚಹಲ್‌ ಕೋವಿಡ್‌-19 ವಿರಾಮವನ್ನು ಎಂಜಾಯ್‌ ಮಾಡುತ್ತಿದ್ದಾರೆ. ಸೆಪ್ಟೆಂಬರ್‌ 19ಕ್ಕೆ ಯುಎಇಯಲ್ಲಿ ಆರಂಭವಾಗಲಿರುವ ಐಪಿಎಲ್‌ 13 ನೇ ಆವೃತ್ತಿಗೆ ಚಹಲ್‌ ಪೂರ್ವ ತಯಾರಿಯಲ್ಲಿದ್ದಾರೆ. ಶ್ರೀಮಂತ ಫ್ರಾಂಚೈಸಿ ಲೀಗ್‌ನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT