ಕ್ರಿಕೆಟ್

ದಾಖಲೆ ನಿರ್ಮಿಸಿದ ಜೇಮ್ಸ್ ಆ್ಯಂಡರ್ಸನ್; ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪಡೆದ ಮೊದಲ ವೇಗಿ 

Srinivasamurthy VN

ಸೌತಾಂಪ್ಟನ್: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ದಾಖಲೆ ನಿರ್ಮಾಣ ಮಾಡಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 600 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇಂಗ್ಲೆಂಡ್ ನ ಸೌಥ್ಯಾಂಪ್ಟನ್ ನಲ್ಲಿ ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಅಜರ್ ಅಲಿ ವಿಕೆಟ್‌ ಉರುಳಿಸುವ ಮೂಲಕ ಜೇಮ್ಸ್‌ ಆ್ಯಂಡರ್ಸನ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 600 ವಿಕೆಟ್‌ ಕಬಳಿಸಿದ ಸಾಧನೆ ಮಾಡಿದರು. ಇದರೊಂದಿಗೆ ಈ ಸಾಧನೆ ಮಾಡಿದ  ವಿಶ್ವದ ಮೊದಲ ವೇಗದ ಬೌಲರ್‌ ಎಂಬ ಕೀರ್ತಿಗೂ ಭಾಜನರಾದರು. ಇಂಗ್ಲೆಂಡ್‌–ಪಾಕಿಸ್ತಾನ ಮೂರು ಪಂದ್ಯಗಳ ಟೆಸ್ಟ್‌ ಸರಣಿಯ ಅಂತಿಮ ಪಂದ್ಯದ ಕೊನೆಯ ದಿನ ಆ್ಯಂಡರ್ಸನ್‌ ಈ ದಾಖಲೆ ಬರೆದರು.

38 ವರ್ಷ ವಯಸ್ಸಿನ ವೇಗಿ ಇದುವರೆಗೆ ಒಟ್ಟು 156 ಟೆಸ್ಟ್ ಪಂದ್ಯಗಳಲ್ಲಿ, 291 ಇನಿಂಗ್ಸ್‌ಗಳಲ್ಲಿ 26.77ರ ಸರಾಸರಿಯಲ್ಲಿ 600 ವಿಕೆಟ್ ಕಬಳಿಸಿದ್ದಾರೆ. ಆ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ 600 ವಿಕೆಟ್‌ ಕಬಳಿಸಿದ ಮೊದಲ ಬೌಲರ್ ಎಂಬ ಕೀರ್ತಿಗೆ ಆ್ಯಂಡರ್ಸನ್ ಪಾತ್ರರಾಗಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ  ಕ್ರಿಕೆಟ್ ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜೇಮ್ಸ್ ನಾಲ್ಕನೇ ಸ್ಥಾನದಲ್ಲಿದ್ದು, ಸ್ಪಿನ್ನರ್‌ಗಳಾದ ಶ್ರೀಲಂಕಾದ ಮುತ್ತಯ್ಯ ಮುರುಳಿಧರನ್‌ (800 ವಿಕೆಟ್), ಆಸ್ಟ್ರೇಲಿಯಾದ ಶೇನ್‌ ವಾರ್ನ್‌ (708 ವಿಕೆಟ್) ಮತ್ತು ಭಾರತದ ಅನಿಲ್‌ ಕುಂಬ್ಳೆ (619 ವಿಕೆಟ್) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ. 

SCROLL FOR NEXT