ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮ 
ಕ್ರಿಕೆಟ್

ಸಿಹಿಸುದ್ದಿ ಕೊಟ್ಟ ವಿರುಷ್ಕಾ ದಂಪತಿ:ಹೊಸ ವರ್ಷಕ್ಕೆ ಡಬಲ್ ಸಂಭ್ರಮ

ಖ್ಯಾತ ಸೆಲೆಬ್ರಿಟಿ ದಂಪತಿಯಾಗಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮ ಸಿಹಿಸುದ್ದಿ ಕೊಟ್ಟಿದ್ದಾರೆ.

ಖ್ಯಾತ ಸೆಲೆಬ್ರಿಟಿ ದಂಪತಿಯಾಗಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮ ಸಿಹಿಸುದ್ದಿ ಕೊಟ್ಟಿದ್ದಾರೆ.

ಮುಂದಿನ ವರ್ಷ ಆರಂಭಕ್ಕೆ ಅವರ ಮನೆಗೆ ಪುಟ್ಟ ಮಗುವಿನ ಆಗಮನವಾಗಲಿದೆ. ಹೀಗೆಂದು ಸ್ವತಃ ಅವರೇ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದಾರೆ. ಗರ್ಭಿಣಿ ಅನುಷ್ಕಾರೊಂದಿಗೆ ವಿರಾಟ್ ಖುಷಿಯಿಂದ ನಗುತ್ತಾ ನಿಂತಿರುವ ಫೋಟೋವನ್ನು ಸ್ಟಾರ್ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೈರಲ್ ಆಗಿದೆ, ಮೀಮ್ಸ್ ಸೇರಿದಂತೆ ಹಲವು ರೀತಿಯಲ್ಲಿ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ.

2021 ಜನವರಿಯಲ್ಲಿ ನಾವು ಮೂವರಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಪರಸ್ಪರ ಪ್ರೀತಿಸಿ  2017ರ ಡಿಸೆಂಬರ್ 11ರಂದು ಇಟಲಿಯಲ್ಲಿ ವಿವಾಹವಾಗಿದ್ದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಮೂರು ವರ್ಷಗಳ ನಂತರ ತಮ್ಮ ಬಾಳಿನಲ್ಲಿ ಮಗುವನ್ನು ಬರಮಾಡಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ