ಕ್ರಿಕೆಟ್

ಮೊದಲ ಟಿ20: ಆಸ್ಟ್ರೇಲಿಯಾಗೆ ಗೆಲ್ಲಲು 162 ರನ್ ಗಳ ಗುರಿ ನೀಡಿದ ಭಾರತ

Srinivasamurthy VN

ಕ್ಯಾನ್ ಬೆರ್ರಾ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 162 ರನ್ ಗಳ ಸವಾಲಿನ ಗುರಿ ನೀಡಿದೆ.

ಕ್ಯಾನ್ ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಕೆಎಲ್ ರಾಹುಲ್ ಅವರ ಅರ್ಧಶತಕ ಮತ್ತು ರವೀಂದ್ರ ಜಡೇಜಾ ಅವರ ಸಮಯೋಚಿತ ಆಟದ  ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಆರಂಭಿಕ ಆಟಗಾರ ರಾಹುಲ್ 51 ರನ್ ಗಳಿಸಿದರೆ, ರವೀಂದ್ರ ಜಡೇಜಾ ಅಜೇಯ 44 ರನ್ ಗಳಿಸಿ ಭಾರತದ ಸವಾಲಿನ ಮೊತ್ತಕ್ಕೆ ಕಾರಣರಾದರು. 

ಧವನ್ ಕೇವಲ 1 ರನ್ ಗಳಿಸಿದರೆ, ಕೊಹ್ಲಿ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಸಂಜು ಸ್ಯಾಮ್ಸನ್ ಬಂದಷ್ಟೇ ವೇಗವಾಗಿ 23 ರನ್ ಗಳಿಸಿ ಹೆನ್ರಿಕ್ಸ್ ವಿಕೆಟ್ ಒಪ್ಪಿಸಿದರು. ಹಾರ್ದಿಕ್ ಪಾಂಡ್ಯ 16 ರನ್ ಗಳಿಸಿದೆ ಉಳಿದ ಯಾವ ಆಟಗಾರರೂ ಎರಡಂಕಿ ಮೊತ್ತ ದಾಟಲಿಲ್ಲ. ಅಂತಿಮವಾಗಿ ಭಾರತ  ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಗೆ ಗೆಲ್ಲಲು 162  ರನ್ ಗಳ ಗುರಿ ನೀಡಿತು.

ಆಸಿಸ್ ಪರ ಹೆನ್ರಿಕ್ಸ್ 3 ವಿಕೆಟ್ ಕಬಳಿಸಿದರೆ, ಮಿಚೆಲ್ ಸ್ಟಾರ್ಕ್ 2, ಜಂಪಾ ಮತ್ತು ಸ್ವೆಪ್ಸನ್ ತಲಾ 1 ವಿಕೆಟ್ ಪ

SCROLL FOR NEXT