ಟಾಸ್ ಗೆದ್ದ ಭಾರತ 
ಕ್ರಿಕೆಟ್

2ನೇ ಟಿ20; ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಗಾಯಾಳು ಜಡೇಜಾ ಔಟ್, ಚಹಲ್ ಇನ್!

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಗಾಯಾಳು ರವೀಂದ್ರ ಜಡೇಜಾ ಬದಲಿಗೆ ಯುಜವೇಂದ್ರ ಚಹಲ್ ತಂಡ ಸೇರಿಕೊಂಡಿದ್ದಾರೆ.

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಗಾಯಾಳು ರವೀಂದ್ರ ಜಡೇಜಾ ಬದಲಿಗೆ ಯುಜವೇಂದ್ರ ಚಹಲ್ ತಂಡ ಸೇರಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ಈ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಮೇಲುಗೈ ಸಾಧಿಸುವ ಉತ್ಸಾಹದಲ್ಲಿದೆ. ಆದರೆ ಕಲೆದ ಪಂದ್ಯದ ಹೀರೋ ರವೀಂದ್ರ ಜಡೇಜಾ ಅನುಪಸ್ಥಿತಿ ತಂಡವನ್ನು  ಕಾಡಲಿದೆಯಾದರೂ, ಬೌಲಿಂಗ್ ನಲ್ಲಿ ಮ್ಯಾಜಿಕ್ ಮಾಡಿದ್ದ ಚಹಲ್ ತಂಡ ಸೇರ್ಪಡೆಯಾಗಿರುವುದು ಸಮಾಧಾನದ ಸಂಗತಿಯಾಗಿದೆ. ಅಂತೆಯೇ ಮಹಮದ್ ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಮನೀಷ್ ಪಾಂಡೆ ಎಲ್ಬೋ ಸಮಸ್ಯೆಯಿಂದಾಗಿ ಪಂದ್ಯದಿಂದ ದೂರ ಉಳಿದಿದ್ದಾರೆ. ಇವರಿಬ್ಬರ  ಬದಲಿಗೆ, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ತಂಡ ಸೇರಿಕೊಂಡಿದ್ದಾರೆ.

ಇತ್ತ ಆಸ್ಟ್ರೇಲಿಯಾ ಕೂಡ ತನ್ನ ತಂಡದಲ್ಲಿ ಬದಲಾವಣೆ ಮಾಡಿಕೊಂಡಿದ್ದು, ನಾಯಕ ಆ್ಯರೋನ್ ಫಿಂಚ್, ಹೇಜಲ್ ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಗೆ ವಿಶ್ರಾಂತಿ ನೀಡಲಾಗಿದ್ದು, ಡೇನಿಯಲ್ ಸ್ಯಾಮ್ಸ್, ಮಾರ್ಕಸ್ ಸ್ಟಾಯ್ನಿಸ್ ಮತ್ತು ಆ್ಯಂಡ್ರ್ಯೂ ಟೈಪ್ ತಂಡ ಸೇರಿಕೊಂಡಿದ್ದಾರೆ.

ತಂಡಗಳು ಇಂತಿವೆ
ಆಸ್ಟ್ರೇಲಿಯಾ: ಡಿ ಆರ್ಸಿ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್ ಮತ್ತು ನಾಯಕ), ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಮಿಚೆಲ್ ಸ್ವೆಪ್ಸನ್, ಆಡಮ್ ಜಂಪಾ, ಆಂಡ್ರ್ಯೂ ಟೈಪ್

ಭಾರತ: ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಟಿ ನಟರಾಜನ್, ಯುಜ್ವೇಂದ್ರ ಚಹಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!