ಮಾಥ್ಯೂ ವೇಡ್ 
ಕ್ರಿಕೆಟ್

3ನೇ ಟಿ20 ಪಂದ್ಯ: ಭಾರತಕ್ಕೆ 187 ರನ್ ಗಳ ಗುರಿ ನೀಡಿದ ಆಸ್ಟ್ರೇಲಿಯಾ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ 187 ರನ್ ಗಳ ಗುರಿ ನೀಡಿದೆ.

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ 187 ರನ್ ಗಳ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ಮ್ಯಾಥ್ಯೂ ವೇಡ್ (80 ರನ್) ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ (54 ರನ್) ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ನಾಯಕ ಫಿಂಚ್ ಶೂನ್ಯಕ್ಕೆ ಔಟಾದರೂ, ಮತ್ತೊಂದು  ತುದಿಯಲ್ಲಿದ್ದ ಮ್ಯಾಥ್ಯೂ ವೇಡ್ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೇವಲ 53 ಎಸೆತಗಳನ್ನು ಎದುರಿಸಿದ ಅವರು, 7 ಬೌಂಡರಿ ಮತ್ತು 2 ಸಿಕ್ಸರ್ ಗಳ ನೆರವಿನಿಂದ 80 ರನ್ ಸಿಡಿಸಿದರು. 

ಸ್ಟ್ವೀವೆನ್ ಸ್ಮಿತ್ 24 ರನ್ ಗಳಿಸಿ ಔಟಾದರೆ ಬಳಿಕ ಕ್ರೀಸ್ ಗೆ ಆಗಮಿಸಿದ ಮಧ್ಯಮ ಕ್ರಮಾಂಕ ಆಟಗಾರ ಗ್ಲೇನ್ ಮ್ಯಾಕ್ಸ್ ವೆಲ್ ಸ್ಫೋಟಕ ಪ್ರದರ್ಶನ ನೀಡಿದರು, ಕೇವಲ 36 ಎಸೆತಗಳನ್ನು ಎದುರಿಸಿದ ಅವರು 54 ರನ್ ಗಳನ್ನು ಸಿಡಿಸಿ ಆಸ್ಟ್ರೇಲಿಯಾ ಮೊತ್ತ 160 ಗಡಿ ದಾಟಲು ನೆರವಾದರು.  ಅಂತಿಮವಾಗಿ ಫಿಂಚ್ ಪಡೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.

ಭಾರತದ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರೆ, ನಟರಾಜನ್ ಮತ್ತು ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT