ಕೊಹ್ಲಿ 
ಕ್ರಿಕೆಟ್

ಫುಲ್ ಜೋಶ್‌ನಲ್ಲಿದ್ದ ಕೊಹ್ಲಿಯನ್ನು ಕಕ್ಕಾಬಿಕ್ಕಿಯಾಗುವಂತೆ ಮಾಡಿದ ಕ್ರಿಕೆಟ್ ಅಭಿಮಾನಿ, ವಿಡಿಯೋ ವೈರಲ್!

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್ ಗಳಿಂದ ಸೋಲುಂಡಿದ್ದರೂ ಸರಣಿ ಗೆದ್ದು ಬೀಗಿದೆ. 

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್ ಗಳಿಂದ ಸೋಲುಂಡಿದ್ದರೂ ಸರಣಿ ಗೆದ್ದು ಬೀಗಿದೆ. 

ಇನ್ನು ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ 85 ರನ್ ಪೇರಿಸಿದ್ದರು. ಫುಲ್ ಜೋಶ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೊಹ್ಲಿಗೆ ಕ್ರಿಕೆಟ್ ಅಭಿಮಾನಿಯೊಬ್ಬ ಬೇಜಾರಿನಿಂದ ಮೂಗಿನ ಮೇಲೆ ಕೈಯಿಡುವಂತೆ ಮಾಡಿದ್ದಾರೆ. 

ಬೌಂಡರಿ ಗೆರೆಯಲ್ಲಿ ನಿಂತಿದ್ದ ಕೊಹ್ಲಿ ಫೀಲ್ಡಿಂಗ್ ಸೆಟೆಪ್ ಮಾಡುತ್ತಿದ್ದರು. ಈ ವೇಳೆ ಕೊಹ್ಲಿಯನ್ನು ಕಂಡ ಅಭಿಮಾನಿಗಳು ಡ್ಯಾನ್ಸ್ ಮಾಡಲು ಶುರು ಮಾಡಿದರು. ಅದರಲ್ಲಿ ಓರ್ವ ಅಭಿಮಾನಿ ಸೊಂಟವನ್ನು ಬಳುಕಿಸಿ ಡ್ಯಾನ್ಸ್ ಮಾಡಿದ್ದರು. ತಮ್ಮ ಹಿಂದೆ ಅಭಿಮಾನಿ ಮಾಡಿದ ಡ್ಯಾನ್ಸ್ ಮಾಡಿದ್ದನ್ನು ದೊಡ್ಡ ಪರದೆಯಲ್ಲಿ ಕಂಡ ಕೊಹ್ಲಿ ಬೇಸರದಿಂದ ಮೂಗಿನ ಮೇಲೆ ಕೈಯಿಟ್ಟುಕೊಂಡರು. ಈ ವಿಡಿಯೋ ಇದೀಗ ವೈರಲ್ ಆಗಿದೆ. 

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ ತನ್ನ ಪಾಲಿನ 20 ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 186 ರನ್‌ ದಾಖಲಿಸಿತು. 187 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿ 12 ರನ್ ಗಳಿಂದ ಆಸ್ಟ್ರೇಲಿಯಾಗೆ ಶರಣಾಯಿತು.

ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದರೂ ಟಿ20 ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ