ಕೊಹ್ಲಿ 
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲೇ ಮುಂದುವರೆದ ಕೊಹ್ಲಿ, ಟಾಪ್ 50ರಲ್ಲಿ ಸ್ಥಾನ ಪಡೆದ ಪಾಂಡ್ಯ!

ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಅರ್ಧಶತಕ ಗಳಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಪುರುಷರ ಏಕದಿನ ಆಟಗಾರರ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

ದುಬೈ: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಅರ್ಧಶತಕ ಗಳಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಪುರುಷರ ಏಕದಿನ ಆಟಗಾರರ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. 

ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಮವಾಗಿ ಎರಡನೇ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 89 ಮತ್ತು 63 ರನ್ ಬಾರಿಸಿದ್ದರು. ಇನ್ನು ಕೊಹ್ಲಿ 870 ಅಂಕಗಳನ್ನು ಹೊಂದಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 

ಮಂಡಿರಜ್ಜು ಗಾಯದಿಂದಾಗಿ ಏಕದಿನ ಸರಣಿಯನ್ನು ಕಳೆದುಕೊಂಡಿದ್ದರೂ, ರೋಹಿತ್ ಶರ್ಮಾ(842) ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನ ನಾಯಕ ಬಾಬರ್ ಅಜಾಂಗಿಂತ ಐದು ಪಾಯಿಂಟ್ ಮುಂದಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2019ರ ನಂತರ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ 90 ರನ್ ಮತ್ತು ಮೂರನೇ ಪಂದ್ಯದಲ್ಲಿ 92 ರನ್ ಗಳಿಸಿ 49ನೇ ಸ್ಥಾನಕ್ಕೆ ಜಿಗಿದಿದ್ದಾರೆ. 553 ಅಂಕಗಳೊಂದಿಗೆ ಅಗ್ರ 50 ಬ್ಯಾಟ್ಸ್‌ಮನ್‌ಗಳಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

ಬೌಲಿಂಗ್‌ನಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ 700 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ (722) ಮತ್ತು ಅಫ್ಗಾನ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್(701) ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT