ಮೊಹಮ್ಮದ್ ಸಿರಾಜ್ 
ಕ್ರಿಕೆಟ್

ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಧಾವಿಸಿ ಅಭಿಮಾನಿಗಳ ಹೃದಯ ಗೆದ್ದ ಸಿರಾಜ್, ವಿಡಿಯೋ!

ಆಸ್ಟ್ರೇಲಿಯಾ 'ಎ' ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಸಿಡಿಸಿದ ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಕೂಡಲೇ ಧಾವಿಸಿದ್ದು ಇದು ಅಭಿಮಾನಿಗಳ ಮನ ಗೆದ್ದಿದೆ.

ಸಿಡ್ನಿ: ಆಸ್ಟ್ರೇಲಿಯಾ 'ಎ' ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಸಿಡಿಸಿದ ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಕೂಡಲೇ ಧಾವಿಸಿದ್ದು ಇದು ಅಭಿಮಾನಿಗಳ ಮನ ಗೆದ್ದಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೂಮ್ರಾ 57 ಎಸೆತಗಳಲ್ಲಿ 55 ರನ್ ಗಳಿಸಿದ ಶ್ರೇಷ್ಠ ಭಾರತೀಯ ಆಟಗಾರ ಎನಿಸಿಕೊಂಡರು. ಇನ್ನು 40 ರನ್ ಗಳಿಸಿದ್ದಾಗ ಬುಮ್ರಾ ಆಸ್ಟ್ರೇಲಿಯಾ ಎ ತಂಡದ ವೇಗಿ ಕ್ಯಾಮೆರೂನ್ ಗ್ರೀನ್ ಎಸೆದ ಚೆಂಡನ್ನು ಸ್ಟ್ರೈಟ್ ಡ್ರೈವ್ ಮಾಡಿದರು. ಈ ವೇಳೆ ಚೆಂಡು ಬಡಿದು ಗ್ರೀನ್ ಕುಸಿದು ಬಿದ್ದರು. 

ಈ ವೇಳೆ ಬುಮ್ರಾ ರನ್ ಓಡಲು ಮುಂದಾದರೂ ಆದರೆ ನಾನ್ ಸ್ಟ್ರೈಕ್ ನಲ್ಲಿದ್ದ ಮೊಹಮ್ಮದ್ ಸಿರಾಜ್ ಬ್ಯಾಟ್ ಬೀಸಾಡಿ ಗ್ರೀನ್ ನೆರವಿಗೆ ಧಾವಿಸಿದರು. ಈ ಮೂಲಕ ಕ್ರೀಡಾಮನೋಭಾವ ಪ್ರದರ್ಶಿಸಿದರು. ಸಿರಾಜ್ ವ್ಯಕ್ತಿತ್ವವನ್ನು ಅಭಿಮಾನಿಗಳು ಹಾಡಿ ಹೋಗಳಿದ್ದಾರೆ. 

ಭಾರತ ತಂಡ, ಆಸ್ಟ್ರೇಲಿಯಾ(ಎ) ವಿರುದ್ದದ ಮೂರು ದಿನಗಳ ಫಿಂಕ್‌ ಬಾಲ್‌ ಅಭ್ಯಾಸ ಪಂದ್ಯದ ಮೊದಲನೇ ದಿನ ಪ್ರಥಮ ಇನಿಂಗ್ಸ್‌ನಲ್ಲಿ 194 ರನ್‌ಗಳಿಗೆ ಆಲೌಟ್‌ ಆಗಿದೆ. ನಂತರ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಎ ತಂಡ 27 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿ ಆಡುತ್ತಿದೆ. 

ವಿರಾಟ್‌ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡದ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT