ಟೀಂ ಇಂಡಿಯಾ ಬೌಲರ್ ಗಳ ಆರ್ಭಟ 
ಕ್ರಿಕೆಟ್

2ನೇ ದಿನದಾಟದ ಅಂತ್ಯಕ್ಕೆ 2ನೇ ಇನ್ನಿಂಗ್ಸ್ ನಲ್ಲಿ ಭಾರತ 9/1, ಆಸಿಸ್ ವಿರುದ್ಧ 62 ರನ್ ಗಳ ಮುನ್ನಡೆ

ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು.

ಅಡಿಲೇಡ್: ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು.

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸಾಧಾರಣ ಮೊತ್ತದ ಹೊರತಾಗಿಯೂ ಪಂದ್ಯದ ಮೇಲೆ ಟೀಂ ಇಂಡಿಯಾ ಹಿಡಿತ ಸಾಧಿಸಿದ್ದು, ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೇವಲ 191 ರನ್ ಗಳಿಗೆ ಕಟ್ಟಿಹಾಕಿದೆ. ಭಾರತ ತಂಡ ಮೊದಲ  ಇನ್ನಿಂಗ್ಸ್ ನಲ್ಲಿ 244 ರನ್ ಗಳಿಸಿದರೆ, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸಿಸ್ ತಂಡ ಭಾರತೀಯ ಬೌಲರ್ ಗಳ ಸಾಂಘಿಕ ಹೋರಾಟಕ್ಕೆ ತತ್ತರಿಸಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು. ಆಸಿಸ್ ಪರ ಲಾಬು ಶ್ಚಾಘ್ನೆ 47 ರನ್ ಮತ್ತು ನಾಯಕ ಟಿಮ್ ಪೈನ್  ಅಜೇಯ 73 ರನ್ ಗಳನ್ನು ಗಳಿಸಿದ್ದು ಬಿಟ್ಟರೆ ಉಳಿದಾವ ಬ್ಯಾಟ್ಸ್ ಮನ್ ಕೂಡ ಗ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರಲು ಭಾರತೀಯ ಬೌಲರ್ ಗಳು ಆಸ್ಪದ ನೀಡಲಿಲ್ಲ.

ಪರಿಣಾಮ ಆಸ್ಟ್ರೇಲಿಯಾ ತಂಡ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 53 ರನ್ ಗಳ ಹಿನ್ನಡೆ ಅನುಭವಿಸಿದೆ. ಭಾರತದ ಆರ್ ಆಶ್ವಿನ್ 4 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ಮತ್ತು ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.

2ನೇ ದಿನದಾಟದ ಅಂತ್ಯಕ್ಕೆ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 9/1, ಆಸಿಸ್ ವಿರುದ್ಧ 62 ರನ್ ಗಳ ಮುನ್ನಡೆ
ಇನ್ನು 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ ಎರಡನೇ ಇನ್ನಿಂಗ್ಸ್ ನಲ್ಲಿ ಒಂದು ವಿಕೆಟ್ ಗೆ 9 ರನ್ ಗಳಿಸಿದ್ದು, ಆ ಮೂಲಕ ಒಟ್ಟಾರೆ 62 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.  ಭಾರತದ ಪರ 2ನೇ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಶಾ ಕೇವಲ 4 ರನ್ ಗಳಿಸಿ ಪ್ಯಾಟ್ ಕಮಿನ್ಸ್ ವಿಕೆಟ್ ಒಪ್ಪಿಸಿದರು. ಬಳಿಕ ಬಾಲಂಗೋಚಿ ಆಟಗಾರನಾಗಿ ಜಸ್ ಪ್ರೀತ್ ಬುಮ್ರಾ ಕ್ರೀಸ್ ಗೆ ಆಗಮಿಸಿದರು. ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿದ್ದು, 5 ರನ್ ಗಳಿಸಿರುವ ಮಯಾಂಕ್ ಅಗರ್ವಾಲ್ ಮತ್ತು ಜಸ್ ಪ್ರೀತ್ ಬುಮ್ರಾ 3ನೇ ದಿನಕ್ಕೆ ಕ್ರೀಸ್ ಕಾಯ್ದು ಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT