ಭಾರತೀಯ ಮಹಿಳಾ ತಂಡ 
ಕ್ರಿಕೆಟ್

ಭಾರತ - ಆಸ್ಟ್ರೇಲಿಯಾ ಮಹಿಳಾ ತಂಡಗಳ ಏಕದಿನ ಸರಣಿ ಮುಂದೂಡಿಕೆ

2021ರ ಜನವರಿಯಲ್ಲಿ ಪೂರ್ವ ನಿಗದಿಯಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಗುರುವಾರ ಮುಂದೂಡಿಕೆಯಾಗಿದೆ.

ಮೆಲ್ಬೋರ್ನ್:  2021ರ ಜನವರಿಯಲ್ಲಿ ಪೂರ್ವ ನಿಗದಿಯಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಗುರುವಾರ ಮುಂದೂಡಿಕೆಯಾಗಿದೆ.

ಭಾರತ ಪುರುಷರ ತಂಡದ ಆಸ್ಟ್ರೇಲಿಯಾ ಪ್ರವಾಸ ಮುಕ್ತಾಯದ ನಂತರ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಎದುರು ನೋಡುತ್ತಿತ್ತು. ಆದರೀಗ ಪ್ರವಾಸದಲ್ಲಿ ಮತ್ತೆ ಮೂರು ಅಂತಾರಾಷ್ಟ್ರೀಯ ಪಂದ್ಯಗಳ ಸೇರ್ಪಡೆಗೆ ಯೋಜನೆ ರೂಪಿಸುತ್ತಿರುವ ಕಾರಣ ಪೂರ್ವ ನಿಗದಿಯ ಸರಣಿಯನ್ನು ಮುಂದಿನ ಅವಧಿಗೆ ಮುಂದೂಡಲಾಗಿದೆ.

ಭಾರತ ಮಹಿಳಾ ತಂಡವನ್ನು ಎದುರಿಸಲು ಆಸ್ಟ್ರೇಲಿಯಾ ಮಹಿಳಾ ತಂಡ ಎದುರು ನೋಡುತ್ತಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹಂಗಾಮಿ ಮುಖ್ಯ ಕಾರ್ಯರನಿರ್ವಹಣಾಧಿಕಾರಿ ನಿಕ್ ಹ್ಯಾಕ್ಲೇ ಹೇಳಿದ್ದಾರೆ. ಡಿಸೆಂಬರ್ ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ, ಸದ್ಯ ನಾಲ್ಕು ಪಂದ್ಯಗಳ ಸರಣಿಯಲ್ಲಿ ಪಾಲ್ಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel