ರೋಹಿತ್ ಶರ್ಮಾ 
ಕ್ರಿಕೆಟ್

ಮೆಲ್ಬೋರ್ನ್ ನಲ್ಲಿ ಅಭ್ಯಾಸ ಆರಂಭಿಸಿದ ರೋಹಿತ್ ಶರ್ಮಾ

ಭಾರತ ತಂಡದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗುರುವಾರ ಇಲ್ಲಿ ತರಬೇತಿ ಆರಂಭಿಸಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದೆ.

ಮೆಲ್ಬೋರ್ನ್:  ಭಾರತ ತಂಡದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗುರುವಾರ ಇಲ್ಲಿ ತರಬೇತಿ ಆರಂಭಿಸಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದೆ.

ಡಿಸೆಂಬರ್ ಮಧ್ಯೆದಲ್ಲಿ ಭಾರತದಿಂದ ಸಿಡ್ನಿಗೆ ಆಗಮಿಸಿದ ರೋಹಿತ್, 14 ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಪೂರೈಸಿದ ನಂತರ ಬುಧವಾರ ಜೈವಿಕ ಸುರಕ್ಷಿತ ತಾಣದಲ್ಲಿರುವ ಭಾರತ ತಂಡವನ್ನು ಸೇರಿಕೊಂಡರು. ಭಾರತ ತಂಡದ ಆರಂಭಿಕ ಆಟಗಾರ ರೋಹಿತ್ ಕ್ಯಾಚ್ ಗಳ ಅಭ್ಯಾಸ ಮಾಡುತ್ತಿರುವ ಚಿತ್ರವನ್ನು ಗುರುವಾರ ಬಿಸಿಸಿಐ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 

ರೋಹಿತ್ ಫಿಟ್ನೆಸ್ ಭಾರತ ತಂಡಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಏಕೆಂದರೆ ನವೆಂಬರ್ 10ಕ್ಕೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಿದ ನಂತರ ರೋಹಿತ್ ಇದುವರೆಗೂ ಆಡಿಲ್ಲ.

ಐಪಿಎಲ್ ವೇಳೆ ಗಾಯಗೊಂಡ ಕಾರಣ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ರೋಹಿತ್ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ರೋಹಿತ್ ಅವರ ಈ ನಿರ್ಧಾರಕ್ಕೆ ಕಾಯಂ ನಾಯಕ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿದರು. 

ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಸರಣಿಗಳು ಮತ್ತು ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿರುವ ರೋಹಿತ್ ಇದೀಗ ಕೊನೆಯ ಎರಡು ಟೆಸ್ಟ್ ಗಳಲ್ಲಿ ಆಡುವ ಸಾಧ್ಯತೆ ಇದೆ. ಆದರೆ ಇದು ಇನ್ನೂ ಖಚಿತಗೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT