ಕ್ರಿಕೆಟ್

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನ ಉಳಿಸಿಕೊಂಡ ಕೊಹ್ಲಿ, 9ಕ್ಕೆ ಕುಸಿದ ರಹಾನೆ

Nagaraja AB

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬಿಡುಗಡೆ ಮಾಡಿದ ಐಸಿಸಿ ಟೆಸ್ಟ್ ಕ್ರಿಕೆಟ್ ಆಟಗಾರರ ಶ್ರೇಯಾಂಕದಲ್ಲಿ  ಇಂಗ್ಲೆಂಡ್  ವೇಗಿ ಮಾರ್ಕ್ ವುಡ್ ಹಾಗೂ ದಕ್ಷಿಣ ಆಫ್ರಿಕಾ ವಿಕೆಟ್ ಕೀಪರ್  ಕ್ವಿಂಟಾನ್  ನ್ ಡಿ ಕಾಕ್ ಅವರು ಗಮನಾರ್ಹ ಏರಿಕೆ ಕಂಡಿದ್ದಾರೆ.ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ, ಉಪ ನಾಯಕ ಅಜಿಂಕ್ಯಾ ರಹಾನೆ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಕೊಹ್ಲಿ 928 ಅಂಕಗಳನ್ನು ಹೊಂದಿದ್ದು, 17 ಪಾಯಿಂಟ್‌ಗಳ ಅಂತರವನ್ನು ಆಸ್ಟ್ರೇಲಿಯಾ ರನ್ ಮಶೀನ್ ಸ್ಟೀವನ್ ಸ್ಮಿತ್ ಅವರಿಂದ ಕಾಯ್ದುಕೊಂಡಿದ್ದಾರೆ. ಚೇತೇಶ್ವರ ಪೂಜಾರ 791 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ರಹಾನೆ ಖಾತೆಯಲ್ಲಿ 759 ಅಂಕಗಳಿವೆ.

ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು 794 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿ ಉಳಿದಿದ್ದಾರೆ. ಜತೆಗೆ, ಸಹ ಆಟಗಾರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಂಟು, ವೇಗಿ ಮೊಹಮ್ಮದ್ ಶಮಿ ಅವರು ಅಗ್ರ 10ರೊಳಗೆ ಸ್ಥಾನದಲ್ಲಿ ಉಳಿದಿದ್ದಾರೆ. ಆಲ್‌ರೌಂಡರ್ ಶ್ರೇಯಾಂಕದಲ್ಲಿ  ರವೀಂದ್ರ ಜಡೇಜಾ 406 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಉಳಿದಿದ್ದಾಾರೆ. ಆರ್. ಅಶ್ವಿನ್ (308) ನಾಲ್ಕನೇ ಸ್ಥಾನದಲ್ಲಿದ್ದಾರೆ.

SCROLL FOR NEXT