ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೊಂದು ಸಾಧನೆ ಮಾಡಿದ ಹಿಟ್ ಮ್ಯಾನ್ ರೋಹಿತ್
ನ್ಯೂಜಿಲೆಂಡ್ ವಿರುದ್ಧದ ಐದನೇ ಮತ್ತು ಕೊನೆಯ ಟಿ-20 ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತೊಂದು ಸಾಧನೆ ಮಾಡಿದ್ದಾರೆ.
ಮೌಟ್ ಮಾಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಐದನೇ ಮತ್ತು ಕೊನೆಯ ಟಿ-20 ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತೊಂದು ಸಾಧನೆ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 14 ಸಾವಿರ ರನ್ ಪೂರೈಸಿದ ಎಂಟನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.ನ್ಯೂಜಿಲೆಂಡ್ ವಿರುದ್ಧದ ಕೊನೆಯ ಟಿ-20 ಪಂದ್ಯದಲ್ಲಿ ರೋಹಿತ್ ಶರ್ಮಾ 31 ರನ್ ಗಳಿಸುತ್ತಿದ್ದಂತೆ ಈ ಸಾಧನೆ ಮಾಡಿದರು.
ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 14 ಸಾವಿರಕ್ಕೂ ಹೆಚ್ಚು ರನ್ ಗಳಿಸಿರುವ ಸಚಿನ್ ತೆಂಡೊಲ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ, ಎಂಎಸ್ ಧೋನಿ, ವಿರೇಂದ್ರ ಸೆಹ್ವಾಗ್ ಹಾಗೂ ಮೊಹಮ್ಮದ್ ಅಜರುದ್ದೀನ್ ಅಂತಹ ದಿಗ್ಗಜ ಆಟಗಾರರ ಪಟ್ಟಿಗೆ ಸೇರ್ಪಡೆಯಾದರು.
ಮೊಹಮ್ಮದ್ ಅಜರುದ್ದೀನ್ (15, 593 )ಸೆಹ್ವಾಗ್ (17, 253) ಗಂಗೂಲಿ ( 18,575) ಕೊಹ್ಲಿ ( 21, 777) ಡ್ರಾವಿಡ್ ( 24, 208) ತೆಂಡೊಲ್ಕರ್ ( 34, 357 ) ರನ್ ಗಳಿಸಿದ್ದು, ಇದೀಗ ರೋಹಿತ್ ಶರ್ಮಾ ಹೊಸದಾಗಿ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.