ಕೊಹ್ಲಿ-ಕೇನ್ ವಿಲಿಯಮ್ಸನ್ 
ಕ್ರಿಕೆಟ್

ಜಗತ್ತಿನ ಅತ್ಯಂತ ಶ್ರೇಷ್ಠ ವಾಟರ್ ಬಾಯ್ ಇವರೇ; ಸರಳತೆಗೆ ಮಾರುಹೋದ ನೆಟಿಗರು, ಫೋಟೋ ವೈರಲ್!

ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಪಂದ್ಯದಿಂದ ಹೊರಗುಳಿದಿದ್ದು ಸಹ ಆಟಗಾರರಿಗಾಗಿ ನೀರು ಮತ್ತು ಪಾನೀಯ ಬಾಟಲಿಗಳನ್ನು ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮೌಂಟ್ ಮಾಂಗ್ನುಯಿ: ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಪಂದ್ಯದಿಂದ ಹೊರಗುಳಿದಿದ್ದು ಸಹ ಆಟಗಾರರಿಗಾಗಿ ನೀರು ಮತ್ತು ಪಾನೀಯ ಬಾಟಲಿಗಳನ್ನು ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಕೇನ್ ವಿಲಿಯಮ್ಸನ್ ಮೂರನೇ ಪಂದ್ಯದ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಐದನೇ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಬಿಡುವಿಲ್ಲದ ವೇಳಾಪಟ್ಟಿ ಹಿನ್ನೆಲೆಯಲ್ಲಿ ಕೊಹ್ಲಿ ಸಹ ಪಂದ್ಯದಿಂದ ಹೊಗುಳಿದು ವಿಶ್ರಾಂತಿ ತೆಗೆದುಕೊಂಡಿದ್ದರು. 

ಆದರೆ ಸಹ ಆಟಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ ವಾಟರ್ ಬಾಯ್ ಆಗಿ ಮೈದಾನದ ಬೌಂಡರಿ ಗೆರೆಯಲ್ಲಿ ಕುಳಿತ್ತಿದ್ದ ಫೋಟೋ ವೈರಲ್ ಆಗಿದ್ದು ಆಟಗಾರರ ಕ್ರೀಡಾಸ್ಫೂರ್ತಿಗೆ ನೆಟಿಗರು ಫಿದಾ ಆಗಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಕ್ವೀನ್ ಸ್ವೀಪ್ ಮಾಡುವ ಮೂಲಕ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT