ಇಮ್ರಾನ್ ಖಾನ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿ ನಾಯಕತ್ವವನ್ನು ಇಮ್ರಾನ್‌ ಖಾನ್‌ಗೆ ಹೊಲಿಸಿದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್

ವಿಶ್ವಕಪ್ ಗೆಲ್ಲಿಸಿಕೊಟ್ಟ ಇಮ್ರಾನ್ ಖಾನ್ ನಾಯಕತ್ವದಲ್ಲಿ ಪಾಕಿಸ್ತಾನ ವಿಜೃಂಭಿಸಿದಂತೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೆರೆಯುತ್ತಿದೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

ನವದೆಹಲಿ: ವಿಶ್ವಕಪ್ ಗೆಲ್ಲಿಸಿಕೊಟ್ಟ ಇಮ್ರಾನ್ ಖಾನ್ ನಾಯಕತ್ವದಲ್ಲಿ ಪಾಕಿಸ್ತಾನ ವಿಜೃಂಭಿಸಿದಂತೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೆರೆಯುತ್ತಿದೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ. 

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮತ್ತು ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತಂಡಗಳ ನಡುವೆ ಸಾಕಷ್ಟು ಸಾಮ್ಯತೆಗಳಿವೆ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯ ಪಟ್ಟಿದ್ದಾರೆ. 

ಪಂದ್ಯ ನಮ್ಮ ಕೈ ಮೀರಿ ಹೋಗಿದೆ ಎಂದು ತೋರಿದಾಗಲೂ ಇಮ್ರಾನ್ ನೇತೃತ್ವದ ಪಾಕಿಸ್ತಾನ ಪಂದ್ಯಗಳನ್ನು ಗೆಲ್ಲುವ ವಿಭಿನ್ನ ಮಾರ್ಗಗಳನ್ನು ಕಂಡುಕೊಂಡಿತ್ತು. ಅದೇ ರೀತಿ ಟೀಂ ಇಂಡಿಯಾದ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಗೆಲುವು ಇಮ್ರಾನ್ ನೇತೃತ್ವದಲ್ಲಿನ ಪಾಕಿಸ್ತಾನವನ್ನು ನೆನಪಿಸುತ್ತದೆ. ತಂಡ ಬಲವಾದ ಆತ್ಮ ನಂಬಿಕೆ ಹೊಂದಿತ್ತು ಎಂದು ಸಂಜಯ್ ಟ್ವೀಟ್ ಮಾಡಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ದದ 5 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿತ್ತು. ಈ ಹಿನ್ನೆಲೆಯಲ್ಲಿ ಕೊಹ್ಲಿ ನಾಯಕತ್ವವನ್ನು ಇಮ್ರಾನ್ ಖಾನ್ ಗೆ ಹೊಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT