ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ 
ಕ್ರಿಕೆಟ್

ನಾಳೆ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ಪಾದಾರ್ಪಣೆ

ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಬಳಿಕ ಭಾರತ ತಂಡ ನಾಳೆಯಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧತೆ ನಡೆಸುತ್ತಿದೆ. 

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಬಳಿಕ ಭಾರತ ತಂಡ ನಾಳೆಯಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧತೆ ನಡೆಸುತ್ತಿದೆ. 

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಾಯಕ ವಿರಾಟ್ ಕೊಹ್ಲಿ, ಪೃಥ್ವಿ ಶಾ ಮತ್ತು ಮಯಾಂಕ್ ಅಗರ್ವಾಲ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎಂದು ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಕ್ಕೆ ತುತ್ತಾದ ಶಿಖರ್ ಧವನ್ ನ್ಯೂಜಿಲೆಂಡ್ ಪ್ರವಾಸದಿಂದ ಹೊರಗುಳಿದಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಪೃಥ್ವಿ ಶಾ ಮತ್ತು ಮಯಾಂಕ್ ಅಗರ್ವಾಲ್ ನಾಳೆ ಚೊಚ್ಚಲ ಏಕದಿನ ಪಂದ್ಯವಾಡಲಿದ್ದಾರೆ.
  
ಅನಿರೀಕ್ಷಿತವಾಗಿ ರೋಹಿತ್ ಶರ್ಮಾ ಕೂಡ ಗಾಯದಿಂದಾಗಿ ಏಕದಿನ ಮತ್ತು ಟೆಸ್ಟ್ ಸರಣಿಗಳಿಂದ ಹೊರಗುಳಿದಿದ್ದಾರೆ. ಅವರ ಬದಲು ಮಯಾಂಕ್ ಅಗರ್ವಾಲ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ.
  
“ರೋಹಿತ್ ಶರ್ಮಾ ಏಕದಿನ ಸರಣಿಗೆ ಅಲಭ್ಯರಾಗಿರುವುದು ಅನಿರೀಕ್ಷಿತ. ಈ ಸರಣಿಯ ಬಳಿಕ ಭಾರತಕ್ಕೆ ಯಾವುದೇ ಏಕದಿನ ಸರಣಿ ಇಲ್ಲ. ಹಾಗಾಗಿ, ಅವರು ಚೇತರಿಸಿಕೊಳ್ಳಲು ಸಾಕಷ್ಟು ಸಮಯವಿದೆ. ಪೃಥ್ವಿ ಶಾ ಇನಿಂಗ್ಸ್ ಆರಂಭಿಸಲಿದ್ದಾರೆ. ಕೆ.ಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ,’’ ಎಂದು ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.
  
ಆಸ್ಟ್ರೇಲಿಯಾ ವಿರುದ್ಧ ಕಳೆದ ಏಕದಿನ ಸರಣಿ ಕಠಿಣವಾಗಿತ್ತು. ಮೊದಲನೇ ಪಂದ್ಯದಲ್ಲಿ ನಾವು ಸೋಲು ಅನುಭವಿಸಿದ್ದೆವು. ನಂತರ, ಸತತ ಎರಡು ಪಂದ್ಯಗಳಲ್ಲಿ ಗೆದ್ದು 2-1 ಅಂತರದಲ್ಲಿ ಏಕದಿನ ಸರಣಿ ಜಯ ಸಾಧಿಸಿದೆವು. ಈ ಸರಣಿ ನಮ್ಮಲ್ಲಿ ವಿಶ್ವಾಸ ಹೆಚ್ಚಿಸಿದೆ. ನಮ್ಮ ಯೋಜನೆಗಳ ಬಗ್ಗೆ ನಮಗೆ ನಂಬಿಕೆ ಇದೆ. ಆದರೆ, ನ್ಯೂಜಿಲೆಂಡ್ ತಂಡವನ್ನು ಎದುರಿಸುವುದು ಸುಲಭವಲ್ಲ,’’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!