ಸಂಗ್ರಹ ಚಿತ್ರ 
ಕ್ರಿಕೆಟ್

ರಣಜಿ ಟ್ರೋಫಿ: 12 ಸಾವಿರ ರನ್ ಪೇರಿಸಿದ ಮೊದಲ ಆಟಗಾರ ವಸೀಮ್ ಜಾಫರ್

ರಣಜಿ ಕ್ರಿಕೆಟ್ ನಲ್ಲಿ ಹಿರಿಯ ಕ್ರಿಕೆಟಿಗ ವಾಸಿಂ ಜಾಫರ್ ದಾಖಲೆ ನಿರ್ಮಾಣ ಮಾಡಿದ್ದು, ಈ ಮಾದರಿಯ ಕ್ರಿಕೆಟ್ ನಲ್ಲಿ 12 ಸಾವಿರ ರನ್ ಪೇರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ನಾಗಪುರ: ರಣಜಿ ಕ್ರಿಕೆಟ್ ನಲ್ಲಿ ಹಿರಿಯ ಕ್ರಿಕೆಟಿಗ ವಾಸಿಂ ಜಾಫರ್ ದಾಖಲೆ ನಿರ್ಮಾಣ ಮಾಡಿದ್ದು, ಈ ಮಾದರಿಯ ಕ್ರಿಕೆಟ್ ನಲ್ಲಿ 12 ಸಾವಿರ ರನ್ ಪೇರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ವಿಧರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ರಣಜಿ ಎಲೈಟ್ ಗ್ರೂಪ್ ಎ ಮತ್ತು ಗ್ರೂಪ್ ಬಿಯ ಮುಂಬೈ ಮತ್ತು ವಿಧರ್ಭ ನಡುವಿನ ಪಂದ್ಯದಲ್ಲಿ ವಸೀಂ ಜಾಫರ್ ಈ ಸಾಧನೆ ಗೈದಿದ್ದಾರೆ. 

2019 ಮತ್ತು 2020ನೇ ಸಾಲಿನ ಕ್ರಿಕೆಟ್ ಋತುವಿನ ಆರಂಭದಲ್ಲೇ ಜಾಫರ್ ಈ ಸಾಧನೆ ಗೈದಿದ್ದಾರೆ. ಇದಕ್ಕೂ ಮೊದಲು 1996-97ರಲ್ಲಿ ರಣಜಿ ಆರಂಭಿಸಿದ್ದ ಜಾಫರ್ 150ನೇ ರಣಜಿ ಪಂದ್ಯವನ್ನಾಡುವ ಮೂಲಕ ಅತೀ ಹೆಚ್ಚು ರಣಜಿ ಪಂದ್ಯವನ್ನಾಡಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು.  

ಜಾಫರ್ ಭಾರತ ಕ್ರಿಕೆಟ್ ತಂಡದ ಪರ 31 ಟೆಸ್ಟ್ ಹಾಗೂ 2 ಏಕದಿನ ಪಂದ್ಯಗಳನ್ನಾಡಿದ್ದು, 2008ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೊನೆಯದಾಗಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ