ಸಂಗ್ರಹ ಚಿತ್ರ 
ಕ್ರಿಕೆಟ್

ಪಾಕ್ ವಿರುದ್ಧ ಸ್ಪಿನ್‌ ದಿಗ್ಗಜ ಅನಿಲ್ ಕುಂಬ್ಳೆ 10 ವಿಕೆಟ್ ಸಾಧನೆಗೆ ಇದೀಗ 21 ವರ್ಷ!

ಭಾರತ ತಂಡದ ಮಾಜಿ ಸ್ಪಿನ್ನರ್‌ ಹಾಗೂ ಟೀಮ್ ಇಂಡಿಯಾ ಮಾಜಿ ಕೋಚ್ ಅನಿಲ್‌ ಕುಂಬ್ಳೆ ಎಂದಾಕ್ಷಣ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಸಾಧನೆ ನಮ್ಮ ನೆನಪಿಗೆ ಬರುತ್ತದೆ. ಸ್ಪಿನ್ ದಂತಕತೆಯೆ ಈ ಸಾಧನೆಯನ್ನು ಭಾರತೀಯ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜನ ಈ ಸಾಧನೆಗೆ ಇದೀಗ 21 ವರ್ಷಗಳು ತುಂಬಿದೆ.

ನವದೆಹಲಿ: ಭಾರತ ತಂಡದ ಮಾಜಿ ಸ್ಪಿನ್ನರ್‌ ಹಾಗೂ ಟೀಮ್ ಇಂಡಿಯಾ ಮಾಜಿ ಕೋಚ್ ಅನಿಲ್‌ ಕುಂಬ್ಳೆ ಎಂದಾಕ್ಷಣ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಸಾಧನೆ ನಮ್ಮ ನೆನಪಿಗೆ ಬರುತ್ತದೆ. ಸ್ಪಿನ್ ದಂತಕತೆಯೆ ಈ ಸಾಧನೆಯನ್ನು ಭಾರತೀಯ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜನ ಈ ಸಾಧನೆಗೆ ಇದೀಗ 21 ವರ್ಷಗಳು ತುಂಬಿದೆ.

1999ರ ಫೆ 7 ರಂದು ಇಲ್ಲಿನ ಫಿರೋಜ್‌ ಶಾ ಕೋಟ್ಲಾ (ಈಗಿನ ಅರುಣ್ ಜೆಟ್ಲಿ ಮೈದಾನ) ಕ್ರೀಡಾಂಗಣದಲ್ಲಿ ಅನಿಲ್ ಕುಂಬ್ಲೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಒಂದೇ ಇನಿಂಗ್ಸ್‌ನಲ್ಲಿ 10 ವಿಕೆಟ್ ಕಿತ್ತು ಸಾಧನೆ ಮಾಡಿದ್ದರು. ಆ  ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್‌ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಕ್ ಲ್ಯಾಕರ್ ಈ ಸಾಧನೆ ಮಾಡಿದ್ದರು.

ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲನೇ ಹಣಾಹಣಿಯಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು ಸೋಲು ಅನುಭವಿಸಿತ್ತು. ದೆಹಲಿ ಪಂದ್ಯದಲ್ಲಿ ಸರಣಿ ಸಮಬಲ ಸಾಧಿಸಲು ಟೀಮ್ ಇಂಡಿಯಾಗೆ  ಗೆಲುವು ಅನಿವಾರ್ಯವಾಗಿತ್ತು. ಈ ವೇಳೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಭಾರತದ ಬ್ಯಾಟಿಂಗ್ ವಿಭಾಗ ಪಾಕಿಸ್ತಾನಕ್ಕೆ 420 ರನ್ ಗುರಿ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ