ಇರ್ಫಾನ್ ಪಠಾಣ್ 
ಕ್ರಿಕೆಟ್

ದೆಹಲಿಯ ಶಾಹೀನ್ ಬಾಗ್‌ನ ಸಿಎಎ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್?, ವೈರಲ್ ವಿಡಿಯೋ!

ದೆಹಲಿಯ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಭಾಗಿಯಾಗಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ನವದೆಹಲಿ: ದೆಹಲಿಯ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಭಾಗಿಯಾಗಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

17 ಸೆಕೆಂಡ್ ಗಳ ಈ ವಿಡಿಯೋದಲ್ಲಿ ಸಿಎಎ, ಎನ್ಆರ್ಸಿ ವಿರುದ್ಧದ ಪ್ರತಿಭಟನೆಯಲ್ಲಿ ಮತ್ತೊಂದು ಸಿಂಹ ಎಂಟ್ರಿಯಾಗಿದೆ. ಅದರ ಹೆಸರು ಇರ್ಫಾನ್ ಪಠಾಣ್ ಎಂದು ಬರೆಯಲಾಗಿದೆ. ಈ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗಿದ್ದು 80 ಸಾವಿರ ವೀಕ್ಷಣೆ ಕಂಡಿದೆ.

ಆದರೆ ವಿಡಿಯೋ ಬಗ್ಗೆ ಅಸಲಿ ಸತ್ಯವೇ ಬೇರೆ ಇದೆ. ಈ ವಿಡಿಯೋ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಇರ್ಫಾನ್ ಪಠಾಣ್ ಭಾಗಿಯಾಗಿರುವುದಲ್ಲ. ಅಸಲಿಗೆ ಜನವರಿ 14ರಂದು ಪಶ್ಚಿಮ ಬಂಗಾಳದ ಕಮರ್ಹಟಿ ಪ್ರದೇಶದಲ್ಲಿ ನಡೆದ ಪ್ರೀಮಿಯರ್ ನಾಕೌಟ್ ಕ್ರಿಕೆಟ್ ಟೂರ್ನಿಗೆ ಇರ್ಫಾನ್ ಚಾಲನೆ ನೀಡಿದ್ದರು. 

ಅಂದು ಚಿತ್ರೀಕರಿಸಿದ್ದ ವಿಡಿಯೋವನ್ನು ತಿರುಚಿ ಇದೀಗ ಅದಕ್ಕೆ ಶಾಹೀನ್ ಬಾಗ್ ಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಲ್ಯಾಬ್ ಅಜಾದ್ ಹೈ ತೇರೆ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಈ ವಿಡಿಯೋ ಜನವರಿ 24ರಂದು ಪೋಸ್ಟ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

SCROLL FOR NEXT