ರಾಸ್ ಟೇಲರ್ 
ಕ್ರಿಕೆಟ್

2ನೇ ಏಕದಿನ: ಭಾರತಕ್ಕೆ ಗೆಲ್ಲಲು 274 ರನ್ ಗಳ ಗುರಿ ನೀಡಿದ ನ್ಯೂಜಿಲೆಂಡ್

ಪ್ರವಾಸಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿ ನೀಡಿದೆ.

ಆಕ್ಲೆಂಡ್: ಪ್ರವಾಸಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿ ನೀಡಿದೆ.

ಆಕ್ಲೆಂಡ್ ನ ಈಡನ್ ಪಾರ್ಕ್ ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಮಾರ್ಟಿನ್ ಗಪ್ಟಿಲ್ (79 ರನ್), ಹೆನ್ರಿ ನಿಕೋಲಸ್ (41 ರನ್) ಮತ್ತು ರಾಸ್ ಟೇಲರ್ (ಅಜೇಯ 73 ರನ್)  ಸಮಯೋಚಿತ ಬ್ಯಾಟಿಂಗ್ ನೆರವಿನಿಂದಾಗಿ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 273 ರನ್ ಪೇರಿಸಿತು. ಆ ಮೂಲಕ ಭಾರತಕ್ಕೆ ಗೆಲ್ಲಲು 274 ರನ್ ಗಳ ಸವಾಲಿನ ಗುರಿ ನೀಡಿದೆ.

ನ್ಯೂಜಿಲೆಂಡ್ ತಂಡ ಅತ್ಯುತ್ತಮ ಆರಂಭ ಪಡೆದಿತ್ತಾದರೂ, ಮಧ್ಯಮ ಕ್ರಮಾಂಕದ ದಿಢೀರ್ ಕುಸಿತದಿಂದ ಕಿವೀಸ್ ಪಡೆಯ ರನ್ ವೇಗಕ್ಕೆ ಕಡಿವಾಣ ಬಿತ್ತು. ಆದರೆ ಅಂತಿಮ ಹಂತದಲ್ಲಿ 9ನೇ ವಿಕೆಟ್ ನಲ್ಲಿ ರಾಸ್ ಟೇಲರ್ ಮತ್ತು ಜೇಮಿಸನ್ ಜೋಡಿ ಮುರಿಯದ 76ರನ್ ಗಳ ದಾಖಲೆಯ ಜೊತೆಯಾಟವಾಡಿ ನ್ಯೂಜಿಲೆಂಡ್ ತಂಡ 250ರ ಗಡಿ ದಾಟುವಂತೆ ಮಾಡಿತು.

ಇನ್ನು ಭಾರತದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದರೆ, ನವದೀಪ್ ಸೈನಿ 2 ಮತ್ತು ಚಹಲ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?