ಐಸಿಸಿ ಮಹಿಳಾ ಟಿ-20 ಶ್ರೇಯಾಂಕ: ಸ್ಮೃತಿ ಮಂಧಾನ ನಾಲ್ಕನೇ ಸ್ಥಾನಕ್ಕೆ ಏರಿಕೆ
ಐಸಿಸಿ ಮಹಿಳಾ ಟಿ-20 ಅಂತಾರಾಷ್ಟ್ರೀಯ ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಪ್ರಕಟವಾಗಿದ್ದು, ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮೂರು ಸ್ಥಾನಗಳ ಜಿಗಿತದೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆದರೆ, ಜೆಮಿಮಾ ರೊಡ್ರಿಗಸ್ ಏಳನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.
ದುಬೈ: ಐಸಿಸಿ ಮಹಿಳಾ ಟಿ-20 ಅಂತಾರಾಷ್ಟ್ರೀಯ ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಪ್ರಕಟವಾಗಿದ್ದು, ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮೂರು ಸ್ಥಾನಗಳ ಜಿಗಿತದೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆದರೆ, ಜೆಮಿಮಾ ರೊಡ್ರಿಗಸ್ ಏಳನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಹರ್ಮನ್ ಪ್ರೀತ್ ಕೌರ್ 9 ನೇ ಸ್ಥಾನದಲ್ಲಿಯೇ ಉಳಿದಿದ್ದಾರೆ.
ಬೌಲರ್ ಗಳ ಪಟ್ಟಿಯಲ್ಲಿ ಪೂನಂ ಯಾದವ್ ಟಾಪ್ 10ರಿಂದ ಹೊರಗುಳಿದಿದ್ದು, 12ನೇ ಸ್ಥಾನದಲ್ಲಿದ್ದಾರೆ. ನಂಬರ್ 3ರಲ್ಲಿರುವ ನ್ಯೂಜಿಲೆಂಡ್ ನ ಸೂಜೈ ಬ್ಯಾಟ್ಸ್ ಅದೇ ಸ್ಥಾನದಲ್ಲಿ ಉಳಿದಿದ್ದಾರೆ. ಕ್ಯಾಪ್ಟನ್ ಸೋಫಿ ಡಿವೈನ್ ನಂಬರ್ 2 ಸ್ಥಾನದಲ್ಲಿದ್ದಾರೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.
ಮೂರು ರಾಷ್ಟ್ರಗಳ ಸರಣಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ್ತಿ ಬೆಥ್ ಮೂನಿ ಹಾಗೂ ಮಂಧಾನ ಎರಡು ಅರ್ಧ ಶತಕಗಳನ್ನು ಬಾರಿಸಿದ್ದರು. ಈ ಮಧ್ಯೆ ಮೆಗ್ ಲ್ಯಾನಿಂಗ್ ಮೊದಲ ಮೂರು ಸ್ಥಾನಗಳಿಂದ ಕೈಬಿಟ್ಟಿದ್ದರೂ ಮೊದಲ ಐದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.