ಎಬಿ ಡಿವಿಲಿಯರ್ಸ್ 
ಕ್ರಿಕೆಟ್

ನಿವೃತ್ತಿ ಘೋಷಿಸಿದ್ದ 360 ಡಿಗ್ರಿ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್‌ ಟಿ-20 ವಿಶ್ವಕಪ್‌ಗೆ?

ದಕ್ಷಿಣ ಆಫ್ರಿಕಾದ ಸ್ಟಾರ್‌ ಬ್ಯಾಟ್ಸ್‌ಮನ್‌ ಎ.ಬಿ ಡಿವಿಲಿಯರ್ಸ್‌ ಅವರ 360 ಡಿಗ್ರಿ ಬ್ಯಾಟಿಂಗ್‌ ಅನ್ನು ಕಣ್ತುಂಬಿಕೊಳ್ಳಲು ವಿಶ್ವದಾದ್ಯಂತ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

ಜೋಹನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಸ್ಟಾರ್‌ ಬ್ಯಾಟ್ಸ್‌ಮನ್‌ ಎ.ಬಿ ಡಿವಿಲಿಯರ್ಸ್‌ ಅವರ 360 ಡಿಗ್ರಿ ಬ್ಯಾಟಿಂಗ್‌ ಅನ್ನು ಕಣ್ತುಂಬಿಕೊಳ್ಳಲು ವಿಶ್ವದಾದ್ಯಂತ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಇದೇ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯುವ ಟಿ-20 ವಿಶ್ವಕಪ್‌ ಟೂರ್ನಿಗೆ ಎಬಿ ಡಿವಿಲಿಯರ್ಸ್ ಗೆ ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಮಾರ್ಕ್‌ ಬೌಷರ್‌ ತಿಳಿಸಿದ್ದಾರೆ.

ಎಲ್ಲ ಮಾದರಿಯಲ್ಲೂ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಿದ್ದ ಡಿವಿಲಿಯರ್ಸ್‌ 2018 ಮಾರ್ಚ್‌ ತಿಂಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೂ ವಿಶ್ವದಾದ್ಯಂತ ಫ್ರಾಂಚೈಸಿ ಟಿ20 ಲೀಗ್‌ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಅವರು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ, ನನ್ನ ಬಳಿ ಅವರು ಚರ್ಚಿಸಿಲ್ಲ. ನಾನು ಅವರ ಬಳಿ ಮಾತನಾಡಿದ್ದೇನೆ. ಅವರನ್ನು ರಾಷ್ಟ್ರೀಯ ತಂಡಕ್ಕೆ ಮರಳಿ ಕರೆ ತರುವುದರ ಬೆಳವಣಿಗೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಬಹಿರಂಗ ಪಡಿಸಲಾಗುವುದು. ಟಿ20 ವಿಶ್ವಕಪ್ ಟೂರ್ನಿಯ ಹೊತ್ತಿಗೆ ತಂಡದಲ್ಲಿ ಅತ್ಯುತ್ತಮ ಆಟಗಾರರನ್ನು ಇರಲು ಬಯಸುತ್ತೇನೆಂದು ಮುಖ್ಯ ಕೋಚ್‌ ಆಗಿ ನೇಮಕವಾದಲೇ ನಾನು ಹೇಳಿದ್ದೇನೆ ಎಂದು ಬೌಷರ್‌ ಇಎಸ್‌ಪಿಎನ್‌ ಕ್ರಿಕ್‌ಇನ್ಫೋಗೆ ತಿಳಿಸಿದ್ದಾರೆ.

ಎಬಿಡಿ ಅತ್ಯುತ್ತಮ ಲಯದಲ್ಲಿದ್ದರೆ ಅವರನ್ನು ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಪರ ಆಡುವಂತೆ ಮನವಿ ಮಾಡಿಕೊಳ್ಳುತ್ತೇವೆ. ಮಹತ್ವದ ಟೂರ್ನಿಗೆ ಅವರು ಅತ್ಯದ್ಬುತ ಆಟಗಾರ. ಚುಟುಕು ವಿಶ್ವಕಪ್‌ಗೆ ಅತ್ಯುತ್ತಮ ತಂಡವನ್ನು ಕಳುಹಿಸಲು ಪ್ರಯತ್ನಿಸಲಾಗುತ್ತದೆ,'' ಎಂದಿದ್ದಾರೆ.

ಸೋಮವಾರ ಡಿವಿಲಿಯರ್ಸ್‌ 36ರ ವಸಂತಕ್ಕೆ ಪದಾರ್ಪಣೆ ಮಾಡಿದ್ದಾರೆ. ಡಿವಿಲಿಯರ್ಸ್‌ 76 ಟಿ20 ಪಂದ್ಯಗಳಿಂದ 26.12ರ ಸರಾಸರಿಯಲ್ಲಿ 1672 ರನ್ ದಾಖಲಿಸಿದ್ದಾರೆ. ಬ್ರಿಸ್ಬೇನ್‌ ಹೀಟ್‌ ತಂಡದ ಬಿಗ್ ಬ್ಯಾಷ್‌ ಲೀಗ್‌ನಲ್ಲಿ ಎಬಿಡಿ ಕೊನೆಯ ಬಾರಿ ಆಡಿದ್ದಾರೆ.

ಟಿ20 ವಿಶ್ವಕಪ್‌ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಜರುಗಲಿದೆ. ಮುಂಬರುವ ಇಂಡಿಯನ್ ಪ್ರೀಮಿಯರ್‌ 13 ನೇ ಆವೃತ್ತಿಯು ಎಬಿಡಿ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಅವರು ರಾಯಲ್‌ ಚಾಲೆಂಜರ್ಸ್‌ ಪರ  ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದೇ ಆದಲ್ಲಿ ಅವರು ದಕ್ಷಿಣ ಆಫ್ರಿಕಾ ಪರ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಆಡುವುದು ಬಹುತೇಕ ಖಚಿತ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT