ಕೆ ಗೌತಮ್ (ಸಂಗ್ರಹ ಚಿತ್ರ) 
ಕ್ರಿಕೆಟ್

ರಣಜಿ ಟ್ರೋಫಿ: ಜಮ್ಮು ಮತ್ತು ಕಾಶ್ಮೀರ ಬಗ್ಗು ಬಡಿದ ಕರ್ನಾಟಕ, ಸೆಮೀಸ್ ಗೆ ದಾಪುಗಾಲು!

ರಣಜಿ ಟ್ರೋಫಿ ಸರಣಿಯಲ್ಲಿ ಕರ್ನಾಟಕ ತಂಡದ ಗೆಲುವಿನ ನಗಾರಿ ಮುಂದುವರೆದಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಭರ್ಜರಿ 167ರನ್ ಗಳ ಅಂತರದಲ್ಲಿ ಮಣಿಸಿ ಸೆಮಿ ಫೈನಲ್ ಪ್ರವೇಶ ಮಾಡಿದೆ.

ಜಮ್ಮು: ರಣಜಿಟ್ರೋಫಿ ಸರಣಿಯಲ್ಲಿ ಕರ್ನಾಟಕ ತಂಡದ ಗೆಲುವಿನ ನಗಾರಿ ಮುಂದುವರೆದಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಭರ್ಜರಿ 167ರನ್ ಗಳ ಅಂತರದಲ್ಲಿ ಮಣಿಸಿ ಸೆಮಿ ಫೈನಲ್ ಪ್ರವೇಶ ಮಾಡಿದೆ.

ಜಮ್ಮುವಿನಲ್ಲಿ ಇಂದು ಮುಕ್ತಾಯಗೊಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಕರ್ನಾಟಕ ತಂಡ 167ರನ್ ಗಳ ಅಂತರದಲ್ಲಿ ಮಣಿಸಿತು. ಕರ್ನಾಟಕ ನೀಡಿದ್ದ 331 ರನ್ ಗಳ ಬೃಹತ್ ಸವಾಲನ್ನು ಬೆನ್ನು ಹತ್ತಿದ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ಬೌಲರ್ ಗಳ ಮಾರಕ ಬೌಲಿಂಗ್ ಗೆ ತತ್ತರಿಸಿ ಕೇವಲ 164ರನ್ ಗಳಿಗೆ ಆಲೌಟ್ ಆಯಿತು. ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಕರ್ನಾಟಕದ ಕೆ ಗೌತಮ್ ಇನ್ನಿಲ್ಲದಂತೆ ಕಾಡಿದರು. ಗೌತಮ್ ಬರೊಬ್ಬರಿ 7 ವಿಕೆಟ್ ಪಡೆಯುವ ಮೂಲಕ ಕರ್ನಾಟಕದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.

ಇನ್ನು ಸೆಮಿ ಫೈನಲ್ ನಲ್ಲಿ ಕರ್ನಾಟಕ ಪ್ರಬಲ ಬಂಗಾಳ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್