ಮುಷ್ಫಿಕರ್ ರಹೀಮ್ 
ಕ್ರಿಕೆಟ್

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶಿಷ್ಠ ದಾಖಲೆ ಬರೆದ ಮುಷ್ಫಿಕರ್ ರಹೀಮ್

ಬಾಂಗ್ಲಾದೇಶದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ಸಾಧನೆಗೆ ಹಿರಿಯ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್‌ ಮುಷ್ಫಿಕರ್ ರಹೀಮ್ ಭಾಜನರಾಗಿದ್ದಾರೆ.

ಢಾಕಾ: ಬಾಂಗ್ಲಾದೇಶದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ಸಾಧನೆಗೆ ಹಿರಿಯ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್‌ ಮುಷ್ಫಿಕರ್ ರಹೀಮ್ ಭಾಜನರಾಗಿದ್ದಾರೆ.

ಇಲ್ಲಿನ ಶೆರ್ ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧ ಮೊದಲನೇ ಟೆಸ್ಟ್‌ ಪಂದ್ಯದ ಮೂರನೇ ದಿನ ಮುಷ್ಫಿಕರ್ ಈ ದಾಖಲೆ ಮಾಡಿದರು. 32ರ ಪ್ರಾಯದ ಬ್ಯಾಟ್ಸ್‌ಮನ್‌ ಸೋಮವಾರ ವೃತ್ತಿ ಜೀವನದ ಮೂರನೇ ದ್ವಿಶತಕ ಸಿಡಿಸಿದ್ದರು. ಇದೀಗ ಅವರು 70 ಟೆಸ್ಟ್‌ ಪಂದ್ಯಗಳಿಂದ ಒಟ್ಟು 4,413 ರನ್ ಗಳಿಸಿದ್ದಾರೆ. ಇದರಲ್ಲಿ ಏಳು ಶತಕಗಳು ಹಾಗೂ 21 ಅರ್ಧಶತಕಗಳು ಒಳಗೊಂಡಿವೆ.

ಆರಂಭಿಕ ಬ್ಯಾಟ್ಸ್‌ಮನ್‌ ತಮೀಮ್ ಇಕ್ಬಾಲ್‌ ಅವರು 60 ಟೆಸ್ಟ್‌ ಪಂದ್ಯಗಳಿಂದ 4,405 ರನ್ ದಾಖಲಿಸಿದ್ದು, ಎರಡನೇ ಸ್ಥಾನದಲ್ಲಿದ್ದಾರೆ. ಶಕೀಬ್ ಅಲ್‌ ಹಸನ್ ಅವರು 56 ಪಂದ್ಯಗಳಿಂದ 3,386 ರನ್ ಗಳಿಸಿ ನಂತರದ ಸ್ಥಾನ ಅಲಂಕರಿಸಿದ್ದಾರೆ. ಹಬಿಬುಲ್ಲಾ ಬಷಾರ್ 3026 ರನ್‌ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT