ಕ್ರಿಕೆಟ್

ಆರ್. ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು- ರವಿಶಾಸ್ತ್ರಿ

Nagaraja AB

ಕ್ರೈಸ್ಟ್‌ಚರ್ಚ್ : ನ್ಯೂಜಿಲೆಂಡ್ ವಿರುದ್ಧ ನಾಳೆ ನಡೆಯುವ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ಸಿದ್ದವಾಗುತ್ತಿದೆ. ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿಅವರು ರವಿಚಂದ್ರನ್ ಅಶ್ವಿನ್ ಅವರು ಬ್ಯಾಟಿಂಗ್ ನಲ್ಲಿ ಸುಧಾರಣೆ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

ಕಳೆದ ಪಂದ್ಯದಲ್ಲಿ ಅಶ್ವಿನ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಆದರೆ, ಬ್ಯಾಟಿಂಗ್ ನಲ್ಲಿ ವಿಫಲರಾಗಿದ್ದರು. ಹಾಗಾಗಿ, ಅವರ ಸ್ಥಾನಕ್ಕೆ ನಾಳಿನ ಪಂದ್ಯದಲ್ಲಿ ರವೀಂದ್ರ ಜಡೇಜಾಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ. 

ಈ ಬಗ್ಗೆ ಪ್ರತಿಕ್ರಿಯಿಸಿದ ರವಿ ಶಾಸ್ತ್ರಿ,” ರವೀಂದ್ರ ಜಡೇಜಾ ಹಾಗೂ ಅಶ್ವಿನ್ ಅವರ ಬಗ್ಗೆ ನಾಳೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಶ್ವಿನ್ ವಿಶ್ವ ದರ್ಜೆಯ ಬೌಲರ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ನಾಳಿನ ಪರಿಸ್ಥಿತಿಗಳನ್ನು ಆಧರಿಸಿ ಅಂತಿಮ 11 ನಿರ್ಧರಿಸುತ್ತೇವೆ ಎಂದಿದ್ದಾರೆ. 

 ಆರ್.ಅಶ್ವಿನ್  ಕಳೆದ ವರ್ಚಗಳಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ್ದಾರೆ. ಆದರೆ, ಅವರ ಬ್ಯಾಟಿಂಗ್‌ನಿಂದ ನಮಗೆ ಬೇಸರವಾಗಿದೆ. ಅವರು ಬ್ಯಾಟಿಂಗ್‌ನಲ್ಲಿ ಸುಧಾರಣೆ ಕಂಡುಕೊಳ್ಳಬೇಕು,’’ ಎಂದು ಅವರು ಸಲಹೆ ನೀಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಾಳೆ ನಡೆಯುವ ಎರಡನೇ ಟೆಸ್ಟ್ ಪಂದ್ಯದ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಶಾಸ್ತ್ರಿ, ಟೆಸ್ಟ್ ಹಾಗೂ ಟಿ20 ಕ್ರಿಕೆಟ್ ನಮಗೆ ನಂ.1 ಆದ್ಯತೆ ಎಂದು ಹೇಳಿದ್ದಾರೆ

ಇದೇ ವರ್ಷ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಹಾಗೂ 2021ರಲ್ಲಿ ಭಾರತದ ಆತಿಥ್ಯದಲ್ಲಿ ಚುಟುಕು ವಿಶ್ವಕಪ್ ನಡೆಯಲಿದೆ. ಅದೇ ರೀತಿ ಮುಂದಿನ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಡ ನಡೆಯಲಿದೆ. ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತ 360 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ ಎಂದು ತಿಳಿಸಿದರು. 

 ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಬಗ್ಗೆ ಏನೂ ನಿರ್ಣಯಿಸುವುದಿಲ್ಲ. ಮುಂದಿನ ಎರಡು ವರ್ಷಗಳಲ್ಲಿ ವೇಳಾಪಟ್ಟಿಯ ಅನುಸಾರವಾಗಿ ಆದ್ಯತೆ ನೀಡುತ್ತೇವೆ. ಟೆಸ್ಟ್ ಹಾಗೂ ಟಿ20 ಕಡೆಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಈ ಬಗ್ಗೆ ನಾವು ಗಮನಿಸಿದ್ದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ನಾವು ಹೆಚ್ಚಿನ ರನ್ ಗಳಿಸಿದ್ದೇವೆ,’’ ಎಂದು ಅವರು ಹೇಳಿದರು.

SCROLL FOR NEXT