ದುಬೈ ನಲ್ಲಿ ಏಷ್ಯಾಕಪ್: ಭಾರತ-ಪಾಕ್ ಪಂದ್ಯದ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಿಷ್ಟು
ಮುಂದಿನ ಏಷ್ಯಾಕಪ್ ದುಬೈ ನಲ್ಲಿ ನಡೆಯಲಿದ್ದು ಪಾಕ್-ಭಾರತ ನಡುವಿನ ಪಂದ್ಯದ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕೋಲ್ಕತ್ತಾ: ಮುಂದಿನ ಏಷ್ಯಾಕಪ್ ದುಬೈ ನಲ್ಲಿ ನಡೆಯಲಿದ್ದು ಪಾಕ್-ಭಾರತ ನಡುವಿನ ಪಂದ್ಯದ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಏಷ್ಯಾಕಪ್ ನ ಆತಿಥ್ಯವನ್ನು ಪಾಕಿಸ್ತಾನ ವಹಿಸಬೇಕಿತ್ತು. ಆದರೆ ಭದ್ರತಾ ದೃಷ್ಟಿಯಿಂದ ಪಾಕಿಸ್ತಾನಕ್ಕೆ ತೆರಳಲು ಸಾಧ್ಯವಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದ್ದರಿಂದ ಈಗ ಟೂರ್ನಿ ದುಬೈಗೆ ವರ್ಗಾವಣೆಯಾಗಿದೆ. "ಏಷ್ಯಾ ಕಪ್ ಟೂರ್ನಿ ದುಬೈ ನಲ್ಲಿ ನಡೆಯಲಿದ್ದು, ಭಾರತ-ಪಾಕಿಸ್ತಾನ ಪಂದ್ಯವನ್ನಾಡಲಿವೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಗೆ ತೆರಳುವುದಕ್ಕೂ ಮುನ್ನ ಹೇಳಿಕೆ ನೀಡಿದ್ದಾರೆ.
2012-13 ರ ನಂತರ ಭಾರತ-ಪಾಕಿಸ್ತಾನ ಲಿಮಿಟೆಡ್ ಓವರ್ ಗಳ ಪಂದ್ಯಗಳನ್ನು ಆಡಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.