ಇಶಾಂತ್ ಶರ್ಮಾ 
ಕ್ರಿಕೆಟ್

2ನೇ ಟೆಸ್ಟ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಮರ್ಮಾಘಾತ: ಇಶಾಂತ್ ಶರ್ಮಾ ಪಂದ್ಯದಿಂದ ಔಟ್

ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆದು ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಿದ್ದ ಇಶಾಂತ್ ಶರ್ಮಾ ಗಾಯಗೊಂಡಿದ್ದಾರೆ.

ನವದೆಹಲಿ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆದು ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಿದ್ದ ಇಶಾಂತ್ ಶರ್ಮಾ ಗಾಯಗೊಂಡಿದ್ದಾರೆ. 

ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತು ಹಿನ್ನಡೆ ಅನುಭವಿಸಿದೆ. ಇದರ ಮಧ್ಯೆ ಹಿರಿಯ ಅನುಭವಿ ಇಶಾಂತ್ ಶರ್ಮಾ ಗಾಯಗೊಂಡಿದ್ದು ನಾಳಿನ ಪಂದ್ಯದಿಂದ ಹೊರಗುಳಿದಿದ್ದಾರೆ.

ಇಶಾಂತ್ ಶರ್ಮಾ ಅವರ ಬಲ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಆದ್ದರಿಂದ, ಅವರು ಕಳೆದ ಎರಡು ದಿನಗಳಿಂದ ತಂಡದೊಂದಿಗೆ ನೆಟ್ಸ್‌ನಲ್ಲಿ ಕಾಣಿಸಿಕೊಂಡರೂ ಬೌಲಿಂಗ್ ಮಾಡಿರಲಿಲ್ಲ. ಆದರೆ, ಶುಕ್ರವಾರ ಅವರು ಅಭ್ಯಾಸಕ್ಕೆ ಗೈರಾಗಿದ್ದರು. ಇಂದು ಅವರನ್ನು ವೈದ್ಯಕೀಯ ತಪಾಣೆಗೆ ಕಳುಹಿಸಿದ್ದು, ವರದಿ ಸದ್ಯದಲ್ಲೇ ಬರಲಿದೆ.

ಇನ್ನು ಇಶಾಂತ್ ಶರ್ಮಾ ಬದಲಿಗೆ ಉಮೇಶ್ ಯಾದವ್ ಅಥವಾ ಯುವ ವೇಗಿ ನವ್ ದೀಪ್ ಸೈನಿ ಅವಕಾಶವನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ. ಇಶಾಂತ್ ಶರ್ಮಾಗೆ ಮತ್ತೆ ಪಾದದ ಗಾಯ ಮರುಕಳಿಸಿದೆ ಎನ್ನಲಾಗುತ್ತಿದೆ. ಅಭ್ಯಾಸ ಸಂದರ್ಭದಲ್ಲಿ ಇಶಾಂತ್ ಕೆಲವೆ ಎಸೆತಗಳನ್ನು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!