ಕರಣ್ ಜೋಹರ್-ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಕೊನೆಗೂ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೊನೆಗೂ 'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಮಾತನಾಡಿದ್ದು, ಓರ್ವ ಕ್ರಿಕೆಟಿಗನಾಗಿ ಇಂತಹ ವಿವಾದಗಳನ್ನು ತಮ್ಮ ಮೈ ಮೇಲೆ ಎಳೆದುಕೊಳ್ಳಲು  ಬಯಸುವುದಿಲ್ಲ ಎಂದು ಹೇಳಿದರು.

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೊನೆಗೂ 'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಮಾತನಾಡಿದ್ದು, ಓರ್ವ ಕ್ರಿಕೆಟಿಗನಾಗಿ ಇಂತಹ ವಿವಾದಗಳನ್ನು ತಮ್ಮ ಮೈ ಮೇಲೆ ಎಳೆದುಕೊಳ್ಳಲು  ಬಯಸುವುದಿಲ್ಲ ಎಂದು ಹೇಳಿದರು.

ಖಾಸಗಿ ಟಿವಿ ಚಾನೆಲ್‌ವೊಂದರಲ್ಲಿ ಬಾಲಿವುಡ್ ನಿರ್ಮಾಪಕ ಹಾಗೂ ನಿರೂಪಕ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದರು. ಇದರಿಂದ ಅವರು ತಾತ್ಕಾಲಿಕ ನಿಷೇಧಕ್ಕೂ ಒಳಗಾಗಿ ನಂತರ, ಇವರ ಮೇಲೆ ಬಿಸಿಸಿಐ ದಂಡ ವಿಧಿಸಿತ್ತು.

ಕ್ರಿಕೆಟಿಗರಾಗಿ ನಮಗೆ ಮುಂದೇನು ಆಗಲಿದೆ ಎಂಬುದರ ಬಗ್ಗೆ ಅರಿವಿರುವುದಿಲ್ಲ. ಚೆಂಡು ನನ್ನ ಅಂಗಳದಲ್ಲಿಲ್ಲ. ಅದು ಬೇರೊಬ್ಬರ ಮುಂದಿದೆ, ಅವರೇ ಶಾಟ್ ಹೊಡೆಯಬೇಕಿದೆ. ಅಂದು ನಡೆದಿದ್ದು ನಾವು ಬಯಸದ ಅತ್ಯಂತ ಕೆಟ್ಟ ಪರಿಸ್ಥಿತಿ ಎಂದರು. ಆ ಘಟನೆ ಬಳಿಕ ಹಾರ್ದಿಕ್ ಪಾಂಡ್ಯ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದರು. 

ಆದರೆ ಪದೇ-ಪದ ಗಾಯದ ಸಮಸ್ಯೆಯಿಂದಾಗಿ  ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬೆನ್ನು ನೋವಿಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಶಸ್ತ್ರ ಚಿಕಿತ್ಸೆಗೊಳಗಾದರು. ಇದೀಗ ಚೇತರಿಸಿಕೊಂಡಿರುವ ಅವರು ಕಮ್‌ಬ್ಯಾಕ್ ಮಾಡುವ ಹಾದಿಯಲ್ಲಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿ ಬಾರಿಯೂ ಇಂತಹ ಪರಿಸ್ಥಿತಿಗಳು ಎದುರಾದಾಗ ಕಮ್ ಬ್ಯಾಕ್ ಮಾಡಲು ಸಾಧ್ಯವಾಗಿರುವುದು ನನ್ನ ಅದೃಷ್ಟವಾಗಿದೆ. ಮಗದೊಂದು ಬಾರಿ ಪುನರಾಗಮನವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದರು.

ಮುಂಬರುವ ನ್ಯೂಜಿಲೆಂಡ್ ಸರಣಿಗೆ ಪಾಂಡ್ಯ ಕಮ್‌ಬ್ಯಾಕ್ ಮಾಡುವ ಸಾಧ್ಯತೆಯಿದೆ. ಇದಕ್ಕೂ ಮೊದಲು ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಪಾಂಡ್ಯ, ನ್ಯೂಜಿಲೆಂಡ್ ಎ ತಂಡದ ವಿರುದ್ಧ ಏಕದಿನ ಸರಣಿಯಲ್ಲಿ ಭಾಗವಹಿಸಲಿದ್ದಾರೆ. ಇದು ಹಾರ್ದಿಕ್ ಪಾಂಡ್ಯ ಪಾಲಿಗೆ ಫಿಟ್ನೆಸ್ ಪರೀಕ್ಷೆಯಾಗಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್