ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಭಾರತ ವಿರುದ್ದ ಆಸ್ಟ್ರೇಲಿಯಾಗೆ 10 ವಿಕೆಟ್‍ಗಳ ಭರ್ಜರಿ ಜಯ!

Vishwanath S

ಮುಂಬೈ: ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಗೆದ್ದು ಹೊಸ ವರ್ಷಕ್ಕೆ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿದೆ. 

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದು ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ತತ್ತರಿಸಿದ್ದ ಭಾರತ 255 ರನ್ ಗಳಿಗೆ ಆಲೌಟ್ ಆಗಿತ್ತು. 

ಭಾರತ ನೀಡಿದ್ದ 256 ರನ್ ಗಳ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 258 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ ಪರ ಆರಂಭಿಕರಾದ ಡೇವಿಡ್ ವಾರ್ನರ್ ಅಜೇಯ 128 ಮತ್ತು ಆರೋನ್ ಪಿಂಚ್ ಅಜೇಯ 110 ರನ್ ಬಾರಿಸಿದ್ದಾರೆ.

ಭಾರತ ಪರ ಶಿಖರ್ ಧವನ್ 74, ಕೆಎಲ್ ರಾಹುಲ್ 47, ವಿರಾಟ್ ಕೊಹ್ಲಿ 16, ರಿಷಬ್ ಪಂತ್ 28 ಮತ್ತು ರವೀಂದ್ರ ಜಡೇಜಾ 25 ರನ್ ಬಾರಿಸಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಸ್ಟಾರ್ಕ್ 3, ಕಮ್ಮಿನ್ಸ್, ರಿಚರ್ಡ್ ಸನ್ ತಲಾ 2 ವಿಕೆಟ್ ಪಡೆದಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. 

SCROLL FOR NEXT