ಕ್ರಿಕೆಟ್

ಏಕದಿನ ರ‍್ಯಾಂಕಿಂಗ್: ಬ್ಯಾಟಿಂಗ್ ನಲ್ಲಿ ಕೊಹ್ಲಿ, ರೋ'ಹಿಟ್' ಪಾರಮ್ಯ, ಬೌಲಿಂಗ್ ನಲ್ಲಿ ಬುಮ್ರಾ ನಂಬರ್ 1

Srinivasamurthy VN

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪರಿಷ್ಕೃತ ಏಕದಿನ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಒಟ್ಟು 886 ರೇಟಿಂಗ್ಸ್ ಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದು, 868 ರೇಟಿಂಗ್ಸ್ ಹೊಂದಿರುವ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಉಳಿದಂತೆ ಪಾಕಿಸ್ತಾನದ ಸ್ಫೋಟಕ ಆಟಗಾರ ಬಾಬರ್ ಅಜಮ್ (829 ರೇಟಿಂಗ್ಸ್) 3 ಮತ್ತು ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್ (815 ರೇಟಿಂಗ್ಸ್) 4ನೇ ಸ್ಥಾನದಲ್ಲಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಬುಮ್ರಾ ಒಟ್ಟು 764 ರೇಟಿಂಗ್ಸ್ ಹೊಂದಿದ್ದಾರೆ. 737 ರೇಟಿಂಗ್ಸ್ ಹೊಂದಿರುವ ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದ್ದು, 701 ರೇಟಿಂಗ್ಸ್ ನೊಂದಿಗೆ ಆಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ 3ನೇ ಸ್ಥಾನದಲ್ಲಿದ್ದಾರೆ.

ಅಂತೆಯೇ ಆಲ್ ರೌಂಡರ್ ಗಳ ವಿಭಾಗದಲ್ಲಿ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ (304 ರೇಟಿಂಗ್ಸ್) ಅಗ್ರ ಸ್ಥಾನದಲ್ಲಿದ್ದು ಈ ಪಟ್ಟಿಯಲ್ಲಿ 233 ರೇಟಿಂಗ್ಸ್ ಹೊಂದಿರುವ ರವೀಂದ್ರ ಜಡೇಜಾ 10ನೇ ಸ್ಥಾನದಲ್ಲಿದ್ದಾರೆ.

ಏಕದಿನ ರ‍್ಯಾಂಕಿಂಗ್ ಪಟ್ಟಿ ಇಂತಿದೆ

SCROLL FOR NEXT