ವಿರಾಟ್ ಕೊಹ್ಲಿ 
ಕ್ರಿಕೆಟ್

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, 8ನೇ ಸ್ಥಾನಕ್ಕೇರಿದ ರಹಾನೆ!

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಅಜಿಂಕ್ಯಾ ರಹಾನೆ 8ನೇ ಸ್ಥಾನಕ್ಕೇರಿದ್ದಾರೆ.

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಅಜಿಂಕ್ಯಾ ರಹಾನೆ 8ನೇ ಸ್ಥಾನಕ್ಕೇರಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಕಿಂಗ್ ನಲ್ಲಿ ಬ್ಯಾಟಿಂಗ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು ಕೊಹ್ಲಿ ಒಟ್ಟು 928 ರೇಟಿಂಗ್ಸ್ ಹೊಂದಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ (827 ರೇಟಿಂಗ್ಸ್) 2ನೇ ಸ್ಥಾನದಲ್ಲಿದ್ದಾರೆ. ಇನ್ನು ಭಾರತದ ಅಂಜಿಕ್ಯಾ ರಹಾನೆ (759 ರೇಟಿಂಗ್ಸ್) 8ನೇ ಸ್ಥಾನಕ್ಕೇರಿದ್ದಾರೆ.

ಇತ್ತ ಬೌಲಿಂಗ್ ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ (904 ರೇಟಿಂಗ್ಸ್) ಅಗ್ರ ಸ್ಥಾನದಲ್ಲಿದ್ದು, 2ನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನ ನೀಲ್ ವ್ಯಾಗ್ನರ್ (852 ರೇಟಿಂಗ್ಸ್)ದಲ್ಲಿದ್ದಾರೆ. ಬೌಲರ್ ಗಳ ಪಟ್ಟಿಯಲ್ಲಿ ಭಾರತದ ಜಸ್ ಪ್ರೀತ್ ಬುಮ್ರಾ (794 ರೇಟಿಂಗ್ಸ್) 6ನೇ ಸ್ಥಾನದಲ್ಲಿದ್ದು, ಆರ್ ಅಶ್ವಿನ್ (772 ರೇಟಿಂಗ್ಸ್) 8ನೇ ಸ್ಥಾನದಲ್ಲಿ ಮತ್ತು ಮಹಮದ್ ಶಮಿ (771 ರೇಟಿಂಗ್ಸ್) 10ನೇ ಸ್ಥಾನದಲ್ಲಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video