ಕ್ರಿಕೆಟ್

4ನೇ ಟಿ20 ಪಂದ್ಯ: ಕೆಎಲ್ ರಾಹುಲ್ ಭರ್ಜರಿ ಸಿಕ್ಸ್, ಮತ್ತೊಮ್ಮೆ ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

Vishwanath S

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯ ಸಹ ಟೈ ನಲ್ಲಿ ಅಂತ್ಯವಾಗಿದ್ದು ನಂತರದ ಸೂಪರ್ ಓವರ್ ನಲ್ಲಿ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ. 

ವಿಲ್ಲಿಂಗ್ಟನ್ ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 165 ರನ್ ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಸಹ ನಿಗದಿತ ಓವರ್ ನಲ್ಲಿ 165 ರನ್ ಪೇರಿಸಿದ್ದು ಪಂದ್ಯ ಟೈನಲ್ಲಿ ಅಂತ್ಯವಾಗಿತ್ತು. 

ಈ ಹಿನ್ನೆಲೆಯಲ್ಲಿ ಉಭಯ ತಂಡಗಳಿಗೂ ಸೂಪರ್ ಓವರ್ ನೀಡಲಾಗಿತ್ತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 1 ವಿಕೆಟ್ ನಷ್ಟಕ್ಕೆ 12 ರನ್ ಪೇರಿಸಿತ್ತು. ಇನ್ನು 13 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ ಮೊದಲ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಿದರು. ಎರಡನೇ ಎಸೆತದಲ್ಲಿ ಬೌಂಡರಿ ಬಾರಿಸಿದರು. ಇನ್ನು 4 ಎಸೆತಗಳಲ್ಲಿ 3 ರನ್ ಬೇಕಿತ್ತು. ಈ ವೇಳೆ ಮೂರನೇ ಎಸೆತದಲ್ಲಿ ರಾಹುಲ್ ಭರ್ಜರಿ ಹೊಡೆತಕ್ಕೆ ಮುಂದಾದರೂ ಆದರೆ ಬೌಂಡರಿ ಗೆರೆಯಲ್ಲಿ ಫೀಲ್ಡರ್ ಕ್ಯಾಚ್ ಹಿಡಿದರು. 

ಪರಿಣಾಮ 3 ಎಸೆತದಲ್ಲಿ 3 ರನ್ ಬೇಕಿತ್ತು. ಈ ವೇಳೆ ಕೊಹ್ಲಿ ನಾಲ್ಕನೇ ಎಸೆತದಲ್ಲಿ 2 ರನ್ ಪಡೆದುಕೊಂಡರು. 5ನೇ ಎಸೆತದಲ್ಲಿ ಬೌಂಡರಿ ಬಾರಿಸಿ ಗೆಲುವು ತಂದುಕೊಟ್ಟರು.

SCROLL FOR NEXT