ಕುಸಾಲ್ ಮೆಂಡಿಸ್ 
ಕ್ರಿಕೆಟ್

ಕಾರು ಗುದ್ದಿ ವೃದ್ದ ಸಾವು: ಶ್ರೀಲಂಕಾ ಸ್ಟಾರ್ ಕ್ರಿಕೆಟಿಗ ಮೆಂಡಿಸ್ ಅರೆಸ್ಟ್

 ಶ್ರೀಲಂಕಾ ಸ್ಟಾರ್ ಆಟಗಾರ ಕುಸಾಲ್ ಮೆಂಡಿಸ್ ಅವರ ಕಾರು ಗುದ್ದಿದ ಪರಿಣಾಮ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದು ಕೊಲಂಬೋ ಪೋಲೀಸರು ಮೆಂಡಿಸ್ ಅವರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. 

ಕೊಲಂಬೋ: ಶ್ರೀಲಂಕಾ ಸ್ಟಾರ್ ಆಟಗಾರ ಕುಸಾಲ್ ಮೆಂಡಿಸ್ ಅವರ ಕಾರು ಗುದ್ದಿದ ಪರಿಣಾಮ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದು ಕೊಲಂಬೋ ಪೋಲೀಸರು ಮೆಂಡಿಸ್ ಅವರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. 

ಜುಲೈ 5 ರ ಬೆಳಿಗ್ಗೆ ಕೊಲಂಬೊ ಉಪನಗರ ಪನದುರಾದಲ್ಲಿ ಈ ಘಟನೆ ನಡೆದಿದೆ. ಮಾಧ್ಯಮಗಳಲ್ಲಿನ ವರದಿಗಳ ಪ್ರಕಾರ, ಈ ವ್ಯಕ್ತಿ ಸ್ಥಳೀಯ ನಿವಾಸಿಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು  ಆದರೆ ಚಿಕಿತ್ಸೆ  ಫಲಿಸದ ಕಾರಣ ಅವರು ಮೃತಪಟ್ಟಿದ್ದಾರೆ. 

ಮೆಂಡಿಸ್ ಮದ್ಯಸೇವಿಸಿ ಕಾರು ಚಲಾಯಿಸುತ್ತಿದ್ದರೆ ಎನ್ನುವುದು ಇನ್ನೂ ದೃಢವಾಗಿಲ್ಲ. ಕ್ರಿಕೆಟಿಗನನ್ನು ಇಂದು ಇಲ್ಲವೇ ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ.

25 ವರ್ಷದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಶ್ರೀಲಂಕಾ ಪರ 44 ಟೆಸ್ಟ್ ಮತ್ತು 76 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಕೋವಿಡ್ ಲಾಕ್ ಡೌನ್ ನಂತರ ಮೆಂಡಿಸ್ ತಮ್ಮ ಅಭ್ಯಾಸವನ್ನು ಪುನಾರಂಭಿಸಿದ್ದಾರೆ. ಶ್ರೀಲಂಕಾದಲ್ಲಿ ಆಂತರಿಕ ಲಾಕ್ ಡೌನ್ ತೆಗೆದು ಹಾಕಲಾಗಿದ್ದು ಮೆಂಡಿಸ್ ರಸ್ತೆಗಿಳಿಯಲು ಇದು ಅನುಕೂಲವಾಗಿದೆ ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT