ಗಂಭೀರ್-ಅಫ್ರಿದಿ 
ಕ್ರಿಕೆಟ್

ಗಂಭೀರ್ ರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಇಷ್ಟಪಡುತ್ತೇನೆ, ಆದರೆ?: ಮತ್ತೆ ಖ್ಯಾತೆ ತೆಗೆದ ಅಫ್ರಿದಿ

ಟೀಂ‌ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್‌ ಶಾಹಿದ್‌ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್‌ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.

ನವದೆಹಲಿ: ಟೀಂ‌ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್‌ ಶಾಹಿದ್‌ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್‌ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.

ಸೋಷಿಯಲ್‌ ಮೀಡಿಯಾಗಳಲ್ಲಿ ಈ ಇಬ್ಬರೂ ಆಟಗಾರರು ಮನಬಂದ ರೀತಿಯಲ್ಲಿ ಕಿತ್ತಾಡಿಕೊಂಡ ಹಲವು ಉದಾಹರಣೆಗಳು ಇವೆ. ಆದರೆ ಇದೀಗ ಕೊಂಚ ವರಸೆ ಬದಲಾಯಿಸಿದರುವ ಪಾಕ್‌ನ ಮಾಜಿ ಆಲ್‌ರೌಂಡರ್‌ ಅಫ್ರಿದಿ, ತಾವು ಗೌತಮ್‌ ಗಂಭೀರ್‌ ಅವರನ್ನು ಒಬ್ಬ ಬ್ಯಾಟ್ಸ್‌ಮನ್‌ ಆಗಿ ಇಷ್ಟ ಪಡುತ್ತೇನೆ ಎಂದಿದ್ದಾರೆ. ಆದರೆ ಒಬ್ಬ ಮನುಷ್ಯನಾಗಿ ಅವರ ವರ್ತನೆ ಸರಿಯಿಲ್ಲ ಎಂಬ ಕ್ಯಾತೆಯನ್ನೂ ತೆಗೆದಿದ್ದಾರೆ.

ಈ ಬಗ್ಗೆ ಪಾಕಿಸ್ತಾನದ ಜನಪ್ರಿಯ ನಿರೂಪಕಿ ಝೈನಬ್‌ ಅಬ್ಬಾಸ್‌ ಜೊತೆಗಿನ ಇನ್‌ಸ್ಟಾಗ್ರಾಮ್‌ ಸಂದರ್ಶನದಲ್ಲಿ ಮಾತನಾಡಿರುವ ಅಫ್ರಿದಿ, ಹಲವು ಸಂದರ್ಭಗಳಲ್ಲಿ ಗಂಭೀರ್‌ ಅವರಲ್ಲಿ ಏನೋ ಸಮಸ್ಯೆ ಇದೆ ಎಂಬುದರ ಬಗ್ಗೆ ತಮಗೆ ಅರಿವಾಗಿದೆ ಎಂದು ಹೇಳಿಕೊಂಡಿದ್ದಾರೆ.

"ಒಬ್ಬ ಕ್ರಿಕೆಟರ್‌ ಮತ್ತು ಒಬ್ಬ ಬ್ಯಾಟ್ಸ್‌ಮನ್‌ ಆಗಿ ನಾನು ಗಂಭೀರ್‌ ಅವರನ್ನು ಇಷ್ಟ ಪಟ್ಟಿದ್ದೇನೆ. ಆದರೆ, ಒಬ್ಬ ಮನುಷ್ಯನಾಗಿ ಅವರು ಕೆಲ ಬಾರಿ ಆಡುವಂತಹ ಮಾತುಗಳು ಮತ್ತು ಅವರ ನಡವಳಿಕೆ ಕಂಡರೆ ಅವರಲ್ಲಿ ಏನೋ ಸಮಸ್ಯೆ ಇದೆ ಎಂದು ಭಾವಿಸಿ ನಿರ್ಲಕ್ಷಿಸುವುದು ಒಳಿತು ಎನಿಸುತ್ತದೆ. ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂಬುದು ಹಲವು ಬಾರಿ ಗೊತ್ತಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT