ಸಚಿನ್ ಗೆ ಸ್ಲೆಡ್ಜ್ ಮಾಡುವ ಧೈರ್ಯ ಯಾರಿಗೂ ಇರಲಿಲ್ಲ: ಪಾಕ್ ಮಾಜಿ ಕ್ರಿಕೆಟಿಗ
ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಮಾಜಿ ಬ್ಯಾಟ್ಸ್‌ಮನ್ ಬಸಿತ್ ಅಲಿ ಅವರು ತಮ್ಮ ಕ್ರಿಕೆಟ್ ದಿನಗಳಲ್ಲಿ ಭಾರತ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಸ್ಲೆಡ್ಜ್ ಮಾಡಲು ಯಾರಿಗೂ ಧೈರ್ಯವಿರಲಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ.
ನವದೆಹಲಿ: ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಮಾಜಿ ಬ್ಯಾಟ್ಸ್‌ಮನ್ ಬಸಿತ್ ಅಲಿ ಅವರು ತಮ್ಮ ಕ್ರಿಕೆಟ್ ದಿನಗಳಲ್ಲಿ ಭಾರತ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಸ್ಲೆಡ್ಜ್ ಮಾಡಲು ಯಾರಿಗೂ ಧೈರ್ಯವಿರಲಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ.
'ಬಸಿತ್ ಅಲಿ ಶೋ'ನ ಇತ್ತೀಚಿನ ಆವೃತ್ತಿಯಲ್ಲಿ ಮಾತನಾಡಿದ ಅವರು, ಅಂಗಳ ಹಾಗೂ ಅಂಗಳದ ಹೊರಗಡೆ ಭಾರತೀಯ ಕ್ರಿಕೆಟ್ ಆಟಗಾರರೊಂದಿಗೆ ಕಳೆದಿದ್ದ ಕ್ಷಣಗಳನ್ನು ಸ್ಮರಿಸಿಕೊಂಡಿದ್ದಾರೆ.
ಯಾವ ವಿಕೆಟ್ ಕೀಪರ್ ಅನ್ನು ನೀವು ತುಂಬಾ ಸ್ಲೆಡ್ಜ್ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ಭಾರತ ತಂಡದ ಮಾಜಿ ವಿಕೆಟ್ ಕೀಪರ್ ನಯಾನ್ ಮೊಂಗಿಯಾ ಅವರಿಗೆ ಹೆಚ್ಚು ಕಿಚಾಯಿಸಲಾಗಿತ್ತು ಎಂದು ತಿಳಿಸಿದರು.
ಸಚಿನ್ ತೆಂಡೂಲ್ಕರ್ ಹಾಗೂ ಅಝರುದ್ದಿನ್ ಅವರನ್ನು ಹೊರತುಪಡಿಸಿ ಇನ್ನೆಲ್ಲರಿಗೂ ಸ್ಲೆಡ್ಜ್ ಮಾಡಲಾಗುತ್ತಿತ್ತು ಎಂದು ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.