ಬೌಲರ್ ಗಳ ಮೇಲೆ ನಿಯಂತ್ರಣ ಸಾಧಿಸಲು ಎಂಎಸ್ ಧೋನಿ ಯತ್ನಿಸುತ್ತಿದ್ದರು: ಇರ್ಫಾನ್ ಪಠಾಣ್
2007ರಲ್ಲಿ ಮಹೇಂದ್ರ ಸಿಂಗ್ ಧೋನಿ ಭಾರತ ತಂಡದ ನಾಯಕತ್ವದ ವಹಿಸಿಕೊಂಡ ಆರಂಭದಲ್ಲಿ ಬೌಲರ್ ಗಳ ಮೇಲೆ ನಿಯಂತ್ರಣ ಸಾಧಿಸಲು ಬಯಸುತ್ತಿದ್ದರು ಎಂದು ಟೀಂ ಇಂಡಿಯಾದ ಮಾಜಿ ಮಧ್ಯಮ ವೇಗಿ ಇರ್ಫಾನ್ ಪಠಾಣ್ ಹೇಳಿದ್ದಾರೆ.
ನವದೆಹಲಿ: 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ಭಾರತ ತಂಡದ ನಾಯಕತ್ವದ ವಹಿಸಿಕೊಂಡ ಆರಂಭದಲ್ಲಿ ಬೌಲರ್ ಗಳ ಮೇಲೆ ನಿಯಂತ್ರಣ ಸಾಧಿಸಲು ಬಯಸುತ್ತಿದ್ದರು ಎಂದು ಟೀಂ ಇಂಡಿಯಾದ ಮಾಜಿ ಮಧ್ಯಮ ವೇಗಿ ಇರ್ಫಾನ್ ಪಠಾಣ್ ಹೇಳಿದ್ದಾರೆ.
2013ರ ವೇಳೆಗೆ ಶಾಂತ ಸ್ವಭಾವಾದ ನಾಯಕ ಇಮೇಜ್ ಬೆಳೆಸಿಕೊಂಡಿದ್ದ ಅವರು ಬೌಲರ್ ಗಳ ಮೇಲೆ ನಂಬಿಕೆ ಹೊಂದಿದ್ದರು ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.
ಧೋನಿ ನಾಯಕತ್ವದಲ್ಲಿ ಕಾಲ ಕಾಲಕ್ಕೆ ತಂದುಕೊಂಡ ಮಾರ್ಪಡುಗಳ ಕುರಿತು 35 ವರ್ಷದ ಇರ್ಫಾನ್ ಪಠಾಣ್, ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಕ್ರಿಕೆಟ್ ಕನೆಕ್ಟೆಡ್ ಕಾರ್ಯಕ್ರಮದಲ್ಲಿ ಈ ವಿಚಾರ ಹಂಚಿಕೊಂಡಿದ್ದಾರೆ. ಇರ್ಫಾನ್ ಈ ವರ್ಷದ ಆರಂಭದಲ್ಲಿ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.