ಬ್ರೇಟ್ ಲೀ-ಶಫಾಲಿ ವರ್ಮಾ 
ಕ್ರಿಕೆಟ್

ಈಕೆ ಸಿಡಿದರೆ ಟೀಂ ಇಂಡಿಯಾಗೆ ಹಬ್ಬ: ಭಾರತ ಮಹಿಳಾ ತಂಡದ ಶಫಾಲಿ ವರ್ಮಾ ಹೊಗಳಿದ ಬ್ರೆಟ್ ಲೀ

ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ವುಮೆನ್ ಶಫಾಲಿ ವರ್ಮಾ ಅವರನ್ನು ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ಶ್ಲಾಘಿಸಿದ್ದಾರೆ.

ಸಿಡ್ನಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ವುಮೆನ್ ಶಫಾಲಿ ವರ್ಮಾ ಅವರನ್ನು ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ಶ್ಲಾಘಿಸಿದ್ದಾರೆ.

ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿಗಾಗಿ ಸಜ್ಜಾಗುತ್ತಿದೆ. ಎಲ್ಲ ಪಂದ್ಯಗಳ ಗೆಲುವಿನಲ್ಲಿ ಶಫಾಲಿ ವರ್ಮಾ ಅತ್ಯುತ್ತಮ ಪಾತ್ರವಹಿಸಿದ್ದರು. 16ರ ಪ್ರಾಯದ ಆಟಗಾರ್ತಿ ಟಿ20 ಕ್ರಿಕೆಟ್‌ನಲ್ಲಿ 147.97 ಸ್ಟ್ರೈಕ್ ರೇಟ್‌ನೊಂದಿಗೆ 438 ರನ್ ಗಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ 161 ರನ್ ಬಾರಿಸಿದ್ದಾರೆ. ಇದರಲ್ಲಿ ಶ್ರೀಲಂಕಾ ವಿರುದ್ಧ ಗಳಿಸಿದ್ದ 47 ರನ್ ಅವರ ಟೂರ್ನಿಯ ಗರಿಷ್ಠ ಮೊತ್ತವಾಗಿದೆ.

“ಶಫಾಲಿ ವರ್ಮಾ ಅತ್ಯದ್ಭುತ ಅಗ್ರ ಕ್ರಮಾಂಕದ ಬ್ಯಾಟ್ಸ್‌ವುಮೆನ್ ಆಗಿದ್ದಾರೆ. ಇವರ ಭಯರಹಿತ ಬ್ಯಾಟಿಂಗ್ ಭಾರತಕ್ಕೆ ಆಸರೆಯಾಗಲಿದೆ. ಇವರ ಬ್ಯಾಟಿಂಗ್ ನೋಡಲು ಅದ್ಭುತವಾಗಿರುತ್ತದೆ,’’ ಎಂದು ಬ್ರೆಟ್ ಲೀ ಗುಣಗಾನ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್