ಎಂಎಸ್ ಧೋನಿ-ಸುನೀಲ್ ಜೋಶಿ 
ಕ್ರಿಕೆಟ್

ಐಪಿಎಲ್‌ನಲ್ಲಿ ಮಿಂಚದಿದ್ರೆ ಟೀಂ ಇಂಡಿಯಾಗೆ ಮರಳುವ ಛಾನ್ಸ್ ಇಲ್ಲ: ಧೋನಿಗೆ ಬಿಸಿಸಿಐ ಖಡಕ್ ಸೂಚನೆ!

2019ರ ವಿಶ್ವಕಪ್ ಟೂರ್ನಿ ಬಳಿಕ ಎಂಎಸ್ ಧೋನಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇನ್ನು ಧೋನಿ ತಂಡಕ್ಕೆ ರೀ ಎಂಟ್ರಿ ನೀಡುವ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ.

ಮುಂಬೈ: 2019ರ ವಿಶ್ವಕಪ್ ಟೂರ್ನಿ ಬಳಿಕ ಎಂಎಸ್ ಧೋನಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇನ್ನು ಧೋನಿ ತಂಡಕ್ಕೆ ರೀ ಎಂಟ್ರಿ ನೀಡುವ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ. 

ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ರೇಸ್ ನಲ್ಲಿ ಎಂಎಸ್ ಧೋನಿ ನಿಲ್ಲಬೇಕಾದರೆ ಐಪಿಎಲ್ 2020ರ ಆವೃತ್ತಿಯಲ್ಲಿ ತಮ್ಮ ಸಾಮರ್ಥ್ಯವನ್ನು ನಿರೂಪಿಸಬೇಕು ಎಂದು ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ. 

ಎಂಎಸ್ ಧೋನಿ ಅದಾಗಲೇ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತರಬೇತಿ ಶಿಬಿರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಮಾರ್ಚ್ 29ರಿಂದ ಐಪಿಎಲ್ 2020ರ ಟೂರ್ನಿ ಆರಂಭವಾಗಲಿದೆ. 

ಕನ್ನಡಿಗ ಸುನೀಲ್ ಜೋಶಿ ಕಳೆದ ವಾರ ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದು ಅವರ ಅಧ್ಯಕ್ಷತೆಯಲ್ಲಿ ಎಂಎಸ್ ಧೋನಿ ಕಮ್ ಬ್ಯಾಕ್ ಕುರಿತಂತೆ ಚರ್ಚೆಗಳು ನಡೆಯಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ