ಗೌತಮ್ ಗಂಭೀರ್, ಟೀಂ ಇಂಡಿಯಾ 
ಕ್ರಿಕೆಟ್

ವಿರಾಟ್‌ ಕೊಹ್ಲಿ ಪರ ಬ್ಯಾಟ್‌ ಬೀಸಿದ ಗೌತಮ್ ಗಂಭೀರ್‌

ಇತ್ತೀಚೆಗೆ ಮುಕ್ತಾಯವಾಗಿದ್ದ ನ್ಯೂಜಿಲೆಂಡ್‌ ಪ್ರವಾಸದ ಎರಡನೇ ಅವಧಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದ್ದಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ನಾಯಕ ಕೊಹ್ಲಿ ಅವರ ಬೆನ್ನಿಗೆ ನಿಂತಿದ್ದಾರೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌.

ನವದೆಹಲಿ: ಇತ್ತೀಚೆಗೆ ಮುಕ್ತಾಯವಾಗಿದ್ದ ನ್ಯೂಜಿಲೆಂಡ್‌ ಪ್ರವಾಸದ ಎರಡನೇ ಅವಧಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದ್ದಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ನಾಯಕ ಕೊಹ್ಲಿ ಅವರ ಬೆನ್ನಿಗೆ ನಿಂತಿದ್ದಾರೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌.

5 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದ್ದ ಕೊಹ್ಲಿ ಪಡೆ ಬಳಿಕ ಏಕದಿನ ಮತ್ತು ಟೆಸ್ಟ್‌ ಸರಣಿಗಳಲ್ಲಿ ಕ್ರಮವಾಗಿ 3-0 ಮತ್ತು 2-0 ಅಂತರದಲ್ಲಿ ವೈಟ್‌ವಾಶ್‌ ಮುಖಭಂಗ ಅನುಭವಿಸಿತ್ತು. 

ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೇಗಿ ಜಸ್ಪ್ರಿತ್‌ ಬುಮ್ರಾ ಅವರ ಪಾಲಿಗೆ ನ್ಯೂಜಿಲೆಂಡ್‌ ಪ್ರವಾಸ ಅತ್ಯಂತ ನಿರಾಶದಾಯಕವಾಗಿತ್ತು.

 ಏಕದಿನ ಮತ್ತು ಟೆಸ್ಟ್‌ ಸರಣಿಯ ಸೋಲಿನ ಬಳಿಕ ಕೊಹ್ಲಿ ಹಾಗೂ ಭಾರತ ತಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕ್ರಿಕೆಟ್‌ ದಿಗ್ಗಜರು ಟೀಕಿಸಿದ್ದರು. ಇದೀಗ, ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಕೊಹ್ಲಿ ಬೆನ್ನಿಗೆ ನಿಂತಿದ್ದಾರೆ.

ಟೈಮ್‌ ಆಫ್‌ ಇಂಡಿಯಾ ಅಂಕಣದಲ್ಲಿ ಈ ಬಗ್ಗೆ ಬರೆದಿರುವ ಗಂಭೀರ್‌, " ವಿಶ್ವದ ಅಗ್ರ ಶ್ರೇಯಾಂಕಿತ ತಂಡ ಭಾರತ ಕಿವೀಸ್ ವಿರುದ್ಧ ಟೆಸ್ಟ್‌ ಸರಣಿಯಲ್ಲಿ 2-0 ಸೋಲಿನ ಬಳಿಕ ಕೊಹ್ಲಿ ಹಾಗೂ ತಂಡವನ್ನು ಟೀಕಿಸಿದ್ದ ರೀತಿ ನಿಜಕ್ಕೂ ಬೇಸರ ಉಂಟು ಮಾಡಿದೆ,'' ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತಿತರ ಆಟಗಾರರು ತಂಡದಿಂದ ಸಹಜವಾಗಿಯೇ ಕೊಹ್ಲಿ  ಅವರ ಮೇಲೆ  ಒತ್ತಡ ಹೆಚ್ಚಾಗಿತ್ತು. ಅಂದಿನ ಪರಿಸ್ಥಿತಿ ಸವಾಲಿನಿಂದ ಕೂಡಿತ್ತು . ಆದರೆ, ಸೋಲಿನ ಕಾರಣ ಕೊಹ್ಲಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್