ಕ್ರಿಕೆಟ್

`ಕೊರೋನಾ ವೈರಸ್ ಎಫೆಕ್ಟ್: ಅಭ್ಯಾಸ ನಿಲ್ಲಿಸಿದ ಚೆನ್ನೈ ಸೂಪರ್ ಕಿಂಗ್ಸ್

Lingaraj Badiger

ಚೆನ್ನೈ: ಕೋವಿಡ್ -19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಶನಿವಾರ ಚೆಪಾಕ್ ಕ್ರೀಡಾಂಗಣದಲ್ಲಿ ತನ್ನ ಅಭ್ಯಾಸ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ.

ಕೊರೋನಾ ವೈರಸ್ ಭೀತಿಯಿಂದಾಗಿ ಐಪಿಎಲ್ 13ನೇ ಆವೃತ್ತಿಯನ್ನು ಏಪ್ರಿಲ್ 15ರವರೆಗೆ ಅಮಾನತಿನಲ್ಲಿಡಲಾಗಿದೆ. ಈ ಮೊದಲಿನ ವೇಳಾಪಟ್ಟಿಯ ಅನುಸಾರ ಮಾರ್ಚ್ 29 ರಂದು ಟೂರ್ನಿ ಆರಂಭವಾಗಬೇಕಿತ್ತು. ಆದರೆ ಕಳೆದ ಹಲವು ದಿನಗಳಿಂದ ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಸ್ ಕೆ ಈ ನಿರ್ಧಾರ ಕೈಗೊಂಡಿದೆ. 

ಸಿಎಸ್ ಕೆ ಆಟಗಾರರೆಲ್ಲರೂ ತಮ್ಮ ತವರಿಗೆ ವಾಪಾಸಾಗುತ್ತಿದ್ದಾರೆ. ಕೇವಲ ಚೆನ್ನೈ ತಂಡವಲ್ಲದೆ ಈಗಾಗಲೇ ಅಭ್ಯಾಸ ಆರಂಭಿಸಿದ್ದ ಇತರ ತಂಡಗಳು ಸಹ ಕೊರೋನಾ ಭೀತಿಯಿಂದ ತಾಲೀಮು ನಡೆಸುವುದನ್ನು ನಿಲ್ಲಿಸಿವೆ.

ಮಾರ್ಚ್ 2ರಿಂದ ಸಿಎಸ್ ಕೆ ತಂಡ ಚೆಪಾಕ್ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿತ್ತು. ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಮುರಳಿ ವಿಜಯ್, ಹರ್ಭಜನ್ ಸಿಂಗ್ ಸೇರಿದಂತೆ ಪ್ರಮುಖ ಆಟಗಾರರು ಕಠಿಣ ತಾಲೀಮಿನಲ್ಲಿ ತೊಡಗಿದ್ದರು. ಅದರಲ್ಲೂ ಟೀಮ್ ಇಂಡಿಯಾದ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕಾದರೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕು ಎಂದು ಆಯ್ಕೆಗಾರರು ಸುಳಿವು ನೀಡಿದ ಹಿನ್ನೆಲೆಯಲ್ಲಿ ಎಲ್ಲರ ನೋಟ ಧೋನಿ ಅವರ ಅಭ್ಯಾಸದ ಮೇಲೆ ನೆಟ್ಟಿತ್ತು.

SCROLL FOR NEXT