ಖೇಲ್ ರತ್ನ ಪ್ರಶಸ್ತಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೆಸರು ಶಿಫಾರಸು!
ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ.
ಮುಂಬೈ: ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ.
ಅಲ್ಲದೆ, ಇಶಾಂತ್ ಶರ್ಮಾ, ಶಿಖರ್ ಧವನ್ ಮತ್ತು ಮಹಿಳಾ ಕ್ರಿಕೆಟರ್ ದೀಪ್ತಿ ಶರ್ಮಾ ಅವರನ್ನು ಅರ್ಜುನ ಪ್ರಶಸ್ತಿಗೆ ನಾಮಕರಣಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ಯುವಜನ ವ್ಯವಹಾರಗಳು, ಕ್ರೀಡಾ ಸಚಿವಾಲಯ 2016ರ ಜನವರಿ 1 ರಿಂದ 2019ರ ಡಿಸೆಂಬರ್ 31ರವರೆಗೆ ಈ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆ ಸಂಬಂಧ ಕ್ರೀಡಾ ಸಚಿವಾಲಯ ನಿಗಧಿಪಡಿಸಿದ ಅವಧಿಯಲ್ಲಿ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ನಾಲ್ಕು ಶತಕ, 8 ಏಕದಿನ ಪಂದ್ಯಗಳಲ್ಲಿ 150 ಕ್ಕಿಂತ ಹೆಚ್ಚು ರನ್ ಗಳಿಸುವ ಮೂಲಕ ಪ್ರಶಸ್ತಿಗೆ ಆರ್ಹತೆ ಪಡೆದುಕೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.