ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಧಣಿವಿಲ್ಲದೆ ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್ಗೆ ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪೂಮಾ ಶೂ ಉಡುಗೊರೆ ನೀಡಿದ್ದಾರೆ.
ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಸಲುವಾಗಿ ವೈದ್ಯರು, ನರ್ಸ್ ಗಳು, ಆರೋಗ್ಯ ಕಾರ್ಯಕರ್ತರು ತಮ್ಮ ಕುಟುಂಬ ಹಾಗೂ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ನಮ್ಮ ದೇಶದ ಭವಿಷ್ಯಕ್ಕಾಗಿ ಎಲ್ಲ ಅಪಾಯವನ್ನು ಮೆಟ್ಟಿನಿಂದು ದುಡಿಯುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದರು.
ನಿಮ್ಮ ನಿಸ್ವಾರ್ಥ ಸೇವೆಗೆ ನನ್ನದೊಂದು ಸಣ್ಣ ಕಾಣಿಕೆ. ಈ ಹೋರಾಟವನ್ನು ಮುಂದುವರಿಸಿ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಕೆಎಲ್ ರಾಹುಲ್ ಪೂಮಾ ಶೂಗಳನ್ನು ಕೊಡುಗೆಯಾಗಿ ನೀಡಿದರು.