ಸಂಗ್ರಹ ಚಿತ್ರ 
ಕ್ರಿಕೆಟ್

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್, ಭರ್ಜರಿ ಆರಂಭ

ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲೇ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ತಂಡ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸಿಡ್ನಿ: ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲೇ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ತಂಡ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ 2ನೇ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಆಸಿಸ್  ನಾಯಕ ಆ್ಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡ ರಕ್ಷಣಾತ್ಮಕ ಆಟ  ನಡೆಸಿದ್ದು, ಆಸಿಸ್ ಪರ ಕ್ರೀಸ್ ಗೆ ಆಗಮಿಸಿರುವ ಡೇವಿಡ್ ವಾರ್ನರ್ ಮತ್ತು ನಾಯಕ ಫಿಂಚ್ ಎಚ್ಚರಿಕೆಯ ಆಟವಾಡುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ 9.2 ಓವರ್ ಗೆ ಆಸಿಸ್ ಪಡೆ ವಿಕೆಟ್ ನಷ್ಟವಿಲ್ಲದೇ 6.00 ರವ್  ಸರಾಸರಿಯಲ್ಲಿ 56 ರನ್ ಗಳಿಸಿದೆ. 33 ಎಸೆತದಲ್ಲಿ 37 ರನ್ ಗಳಿಸಿರುವ ಡೇವಿಡ್ ವಾರ್ನರ್ ಮತ್ತು 24 ಎಸೆತಗಳಲ್ಲಿ 17 ರನ್ ಗಳಿಸಿರುವ ಫಿಂಚ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

ತಂಡಗಳು ಇಂತಿವೆ
ಭಾರತ (ಪ್ಲೇಯಿಂಗ್ ಇಲೆವೆನ್ ): 1 ಶಿಖರ್ ಧವನ್, 2 ಮಾಯಾಂಕ್ ಅಗರ್ವಾಲ್, 3 ವಿರಾಟ್ ಕೊಹ್ಲಿ (ಕ್ಯಾಪ್ಟನ್), 4 ಶ್ರೇಯಸ್ ಅಯ್ಯರ್, 5 ಕೆಎಲ್ ರಾಹುಲ್ (ವಾರ), 6 ಹಾರ್ದಿಕ್ ಪಾಂಡ್ಯ, 7 ರವೀಂದ್ರ ಜಡೇಜಾ, 8 ನವದೀಪ್ ಸೈನಿ, 9 ಮೊಹಮ್ಮದ್ ಶಮಿ, 10 ಜಸ್ಪ್ರೀತ್ ಬುಮ್ರಾ, 11  ಯುಜ್ವೇಂದ್ರ ಚಹಲ್

ಆಸ್ಟ್ರೇಲಿಯಾ (ಪ್ಲೇಯಿಂಗ್ ಇಲೆವೆನ್ ): 1 ಡೇವಿಡ್ ವಾರ್ನರ್, 2 ಆರನ್ ಫಿಂಚ್ (ಕ್ಯಾಪ್ಟನ್), 3 ಸ್ಟೀವನ್ ಸ್ಮಿತ್, 4 ಮಾರ್ನಸ್ ಲ್ಯಾಬುಸ್ಚಾಗ್ನೆ, 5 ಮೊಯಿಸಸ್ ಹೆನ್ರಿಕ್ಸ್, 6 ಅಲೆಕ್ಸ್ ಕ್ಯಾರಿ (ವಾರ), 7 ಗ್ಲೆನ್ ಮ್ಯಾಕ್ಸ್ ವೆಲ್, 8 ಪ್ಯಾಟ್ ಕಮ್ಮಿನ್ಸ್, 9 ಮಿಚೆಲ್ ಸ್ಟಾರ್ಕ್, 10 ಆಡಮ್  ಜಂಪಾ, 11 ಜೋಶ್ ಹೇಜಲ್‌ವುಡ್‌
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!