ಕೆಎಲ್ ರಾಹುಲ್ 
ಕ್ರಿಕೆಟ್

ರಾಹುಲ್ ಅರ್ಧಶತಕ, ಸಿಎಸ್ ಕೆಗೆ 179 ರನ್ ಗಳ ಗುರಿ ನೀಡಿದ ಪಂಜಾಬ್ ಕಿಂಗ್ಸ್ 

ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದೆ.

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಯಕ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರವಾಲ್ ಉತ್ತಮ ಆರಂಭ ಒದಗಿಸಿದರು.

 ರಾಹುಲ್ 52 ಎಸೆತಗಳಲ್ಲಿ ಏಳು ಬೌಂಡರಿ ಮತ್ತು 1 ಸಿಕ್ಸರ್ ಸಹಿತ 63 ರನ್ ಗಳಿಸಿದರು, ಮಯಾಂಕ್ ಅಗರವಾಲ್ 26, ಮನ್ ದೀಪ್ ಸಿಂಗ್ ಮಾನ್ 17, ನಿಕೋಲಸ್ ಪೊರನ್ 33 ರನ್ ಗಳ ಕೊಡುಗೆ ನೀಡಿದರು. ಸರ್ಫರಾಜ್ ಖಾನ್ 14, ಗ್ಲೇನ್ ಮ್ಯಾಕ್ಸ್ ವೆಲ್ 11 ರನ್ ಕಲೆ ಹಾಕುವುದರ ಮೂಲಕ ತಂಡದ ಮೊತ್ತವನ್ನು 175ರ ಗಡಿ ದಾಟಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ಪರ  ಶಾರ್ದೂಲ್ ಠಾಕೂರ್ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಪಿಯೂಷ್ ಚಾವ್ಲಾ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT