ಡಿವಿಲಿಯರ್ಸ್ ಭರ್ಜರಿ ಸಿಕ್ಸರ್: ಮೈದಾನದ ಹೊರಗಿದ್ದ ಕಾರಿನ ಗಾಜು ಪುಡಿಪುಡಿ; ಬಾಲಕನಿಗೆ ಸಿಕ್ಕ ಚೆಂಡು, ವಿಡಿಯೋ!
ಐಪಿಎಲ್ 13ನೇ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ನಿನ್ನೆ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಡಿವಿಲಿಯರ್ಸ್ ಸಿಕ್ಸರ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.
ಶಾರ್ಜಾ: ಐಪಿಎಲ್ 13ನೇ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ನಿನ್ನೆ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಡಿವಿಲಿಯರ್ಸ್ ಸಿಕ್ಸರ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.
ಇನ್ನು ಡಿವಿಲಿಯರ್ಸ್ ಸಿಡಿಸಿದ ಚೆಂಡು ಮೈದಾನದ ಹೊರಗೆ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನ ಗಾಜನ್ನು ಪುಡಿ ಪುಡಿ ಮಾಡಿದೆ. ಮತ್ತೊಂದು ಚೆಂಡು ಅಲ್ಲಿನ ಬಾಲಕನೋರ್ವನಿಗೆ ಸಿಕ್ಕಿದ್ದು ಅದನ್ನು ಕೈಯಲ್ಲಿ ಹಿಡಿದು ಸಂಭ್ರಮಿಸಿದ್ದಾನೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡಿವಿಲಿಯರ್ಸ್ 33 ಎಸೆತಗಳಲ್ಲಿ 73 ರನ್ ಪೇರಿಸಿದ್ದರು. ಇನ್ನು ಎಬಿಡಿ ಆರು ಸಿಕ್ಸರ್ ಬಾರಿಸಿದ್ದರು. ಇದರಲ್ಲಿ ಮೂರು ಸಿಕ್ಸ್ ಗಳು ಮೈದಾನದ ಹೊರಗೆ ಹೋಗಿತ್ತು.
ಐಪಿಎಲ್ 28ನೇ ಪಂದ್ಯದಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯದಲ್ಲಿ ಕೊಹ್ಲಿ ಪಡೆ 82 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.