ಕ್ರಿಕೆಟ್

ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

Raghavendra Adiga

ನವದೆಹಲಿ: ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಸ್ತುತ ನಡೆಯುತ್ತಿರುವ  ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರಲ್ಲಿ ಕಪಿಲ್ ದೇವ್ ಕ್ರಿಕೆಟ್ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಸಾಕಷ್ಟು ಸಕ್ರಿಯರಾಗಿದ್ದರು. ಭಾರತದ ಮಾಜಿ ನಾಯಕ ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನೂ ಹೊಂದಿದ್ದು  ಅವರು  ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. 

ಲಾರ್ಡ್ಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ  ಭಾರತದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ 1983 ರಲ್ಲಿ ಭಾರತವನ್ನು ಮರೆಯಲಾಗದ ವಿಶ್ವಕಪ್ ಗೆಲ್ಲುವುದಕ್ಕೆ ಕಾರಣವಾಗಿದ್ದರು.

ಕಪಿಲ್ ದೇವ್ ಅವರು ಕೆಲವು ತಿಂಗಳ ಹಿಂದೆ, ಲಾಕ್ ಡೌನ್ ಸಮಯದಲ್ಲಿ ಹೊಸ ಲುಕ್ ಹಂಚಿಕೊಂಡಾಗ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟ್ರೆಂಡ್ ಆಗಿ ಹೊರಹೊಮ್ಮಿದ್ದರು. ಇನ್ನು ಕಪಿಲ್ ದೇವ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಬರಬೇಕಿದ್ದು ಅವರ ಕುಟುಂಬದ ಸದಸ್ಯರ ಹೇಳಿಕೆಗಳು ಬರಲು ಕಾಯಲಾಗಿತ್ತಿದೆ. ಆದಾಗ್ಯೂ, ಅವರು ಈಗ ಸ್ಥಿರರಾಗಿದ್ದಾರೆಂದು ಹೇಳಲಾಗುತ್ತದೆ.

SCROLL FOR NEXT