ಕ್ರಿಕೆಟ್

ಟಿ-20: ಸಾಂಪ್ರದಾಯಿಕ ಎದುರಾಳಿ ಆಸಿಸ್ ವಿರುದ್ಧ ಇಂಗ್ಲೆಂಡ್ ಗೆ ಎರಡು ರನ್ ರೋಚಕ ಜಯ

Srinivasamurthy VN

ಸೌಥ್ಯಾಂಪ್ಟನ್: ಕೊನೆಯ ಗಳಿಗೆಯಲ್ಲಿ ಬಿಗುವಿನ ಬೌಲಿಂಗ್ ದಾಳಿ ಮೂಲಕ ಆಸಿಸ್ ದಾಂಡಿಗರನ್ನು ಕಟ್ಟಿಹಾಕಿದ ಇಂಗ್ಲೆಂಡ್ ತಂಡ ಮೂರು ಪಂದ್ಯಗಳ ಟಿ20 ಟೂರ್ನಿಯಲ್ಲಿ ರೋಚಕ ಜಯ ಸಾಧಿಸಿದೆ.

ಇಂಗ್ಲೆಂಡ್ ನ ಸೌಥ್ಯಾಂಪ್ಟನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ ವಿರುದ್ಧ ಆಂಗ್ಲ ಪಡೆ 2 ರನ್ ಗಳ ರೋಚಕ ಜಯ ಸಾಧಿಸಿದೆ.  ಇಂಗ್ಲೆಂಡ್ ನೀಡಿದ 163 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸಿಸ್ ದಾಂಡಿಗರು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ದಾಖಲಿಸಿದೆ.

ಕೊನೆಯ ಓವರ್ ಗಳಲ್ಲಿ ಬಿಗುವಿನ ದಾಳಿ ನಡೆಸಿದ ಬೌಲರ್ ಗಳ ನೆರವಿನಿಂದ ಆತಿಥೆಯ ಇಂಗ್ಲೆಂಡ್ ಮೊದಲ ಟಿ-20 ಪಂದ್ಯದಲ್ಲಿ ಎರಡು ರನ್ ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿತು.

ಡೇವಿಡ್ ಮಲನ್ (66 ರನ್) ಮತ್ತು ಜಾಸ್ ಬಟ್ಲರ್ (44 ರನ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ ಇಯಾನ್ ಮಾರ್ಗನ್ ಬಳಗ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 162 ರನ್ ಕಲೆ ಹಾಕಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸ್ಟೇಲಿಯಾ ತಂಡ  ಡೇವಿಡ್ ವಾರ್ನರ್ ಭರ್ಜರಿ ಅರ್ಧಶತಕದ ಹೊರತಾಗಿಯೂ, ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 160ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಕೇವಲ 2 ರನ್ ಗಳ ಅಂತರದಲ್ಲಿ ಇಂಗ್ಲೆಂಡ್ ಎದುರು ಮಂಡಿಯೂರಿತು.

ಇಂಗ್ಲೆಂಡ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಡೇವಿಡ್ ಮಲನ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.-----

SCROLL FOR NEXT